ಬೆಳಗಾವಿ | ಸಿಗರೇಟ್ ವಿಚಾರಕ್ಕೆ ಹಲ್ಲೆ: ಅಂಗಡಿ ಮಾಲೀಕ ಸಾವು

Date:

ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅಂಗಡಿ ಮಾಲೀಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

- Advertisement -

ಮೃತರನ್ನು ಬೋಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಎಂದು ಗುರುತಿಸಲಾಗಿದೆ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22), ನಿಖಿಲ್ ಮಹೇಶ್ ಚೌಗಲೆ (22), ವಿವೇಕ್ ರಾಜೇಂದ್ರ ಚೌಗುಲೆ (22) ಹಾಗೂ ಶ್ರೀಧ‌ರ್ ರತನ ಪಾಟೀಲ್ (21) ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಿನ್ನೆ ರಾತ್ರಿ ಹುಕ್ಕೇರಿ ತಾಲೂಕಿನ ಮೋಹನಗಾ ಜಾತ್ರೆ ಮುಗಿಸಿಕೊಂಡು ಮದ್ಯದ ಅಮಲಿನಲ್ಲಿ ಇದ್ದ ನಾಲ್ವರು ಯುವಕರು, ಮಧ್ಯರಾತ್ರಿ ಸಿಗರೇಟ್ ಸೇದುವುದಕ್ಕಾಗಿ ಬೋಡಕೆನಟ್ಟಿ ಗ್ರಾಮದಲ್ಲಿ ಬೈಕ್ ನಿಲ್ಲಿಸಿದ್ದಾರೆ. ಅಂಗಡಿ ಮುಚ್ಚುತ್ತಿದ್ದ ಮಾಲೀಕನನ್ನು ತಡೆದು ಸಿಗರೇಟ್ ತೆಗೆದುಕೊಂಡು ಅಲ್ಲೇ ಸೇದಿದ್ದು, ನಂತರ ಹಣ ಕೇಳಿದಾಗ ಮಾತಿನ ಚಕಮಕಿ ನಡೆದಿದೆ.

ವಾಗ್ವಾದ ತೀವ್ರಗೊಂಡು ಹಲ್ಲೆಗೆ ತಿರುಗಿದ್ದು, ಯಲ್ಲಪ್ಪ ನಾಯಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದರೂ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಘಟನೆ ನಡೆದ ತಕ್ಷಣ ಕಾಕತಿ ಪೊಲೀಸರು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...