ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

Date:

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೊದಲ ಮಹಡಿಯ ಮನೆಯೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ. ಅದೃಷ್ಟವಶಾತ್, ಮನೆಯೊಳಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -
1002544416 1

ಸಹ್ಯಾದ್ರಿ ನಗರದ ಶ್ರೀದೇವಿ ಜೋಶಿ ಅವರಿಗೆ ಸೇರಿದ ಮನೆಯಲ್ಲಿ ರೂಪಾ ನಾಶಿಪುಡಿ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾಡಿಗೆಗೆ ವಾಸವಾಗಿದ್ದರು. ಅಮಾವಾಸ್ಯೆಯ ಹಿನ್ನೆಲೆಯಲ್ಲಿ ರೂಪಾ ಅವರು ಮನೆಗೆ ಬೀಗ ಹಾಕಿ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಫ್ರಿಡ್ಜ್ ಸ್ಫೋಟಗೊಂಡಿದೆ ಎನ್ನಲಾಗಿದೆ.

ಮನೆಯೊಳಗಿದ್ದ ಮಕ್ಕಳ ಚೀರಾಟ ಕೇಳಿದ ಮನೆ ಮಾಲಕಿ ಶ್ರೀದೇವಿ ಜೋಶಿ ಅವರು ತಕ್ಷಣ ಧಾವಿಸಿ, ದಟ್ಟ ಹೊಗೆಯ ನಡುವೆಯೂ ಒಳಗೆ ಸಿಲುಕಿದ್ದ ಮಕ್ಕಳಿಬ್ಬರನ್ನು ಸುರಕ್ಷಿತವಾಗಿ ಹೊರತಂದು ರಕ್ಷಿಸಿದ್ದಾರೆ. ಅವರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಘಟನೆಯಿಂದ ಮನೆಯಲ್ಲಿದ್ದ ವಸ್ತುಗಳಿಗೆ ಅಪಾರ ಹಾನಿಯಾಗಿದೆ ಎನ್ನಲಾಗಿದೆ. ಈ ಘಟನೆ ಬೆಳಗಾವಿ ಎಪಿಎಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...