ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಳಮಾರುತಿ ಠಾಣೆಯ ಪೊಲೀಸರು ಸೋಮವಾರ ಶುಭಂ ಶೆಳಕೆಯನ್ನು ಬಂಧಿಸಿ, ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.
ಶುಭಂ ಶೆಳಕೆ ಅವರು ಕನ್ನಡಿಗರಿಗೆ ಗಡಿ ಮತ್ತು ಭಾಷೆಯ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜೊತೆಗೆ ಕನ್ನಡಪರ ಹೋರಾಟಗಾರರನ್ನು ಅವಹೇಳನ ಮಾಡುವ ಪದಗಳನ್ನು ಬಳಸಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.