ಬೆಳಗಾವಿ | ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ಸಾವು

Date:

ಅಣ್ಣನ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ತಂಗಿಯೂ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ತೇರದಾಳ ತಾಲೂಕಿನ ಹನಗಂಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಗುಬಚಿ ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಹೋದರಿ, ರಾಯಬಾಗ ತಾಲೂಕಿನ ಮೊರಬ ಗ್ರಾಮದ ನಿವಾಸಿ ಶ್ರೀದೇವಿ ಕಲ್ಲಪ್ಪ ಅಸೋದೆ (43) ಅವರು ತೀವ್ರ ಆಘಾತಕ್ಕೊಳಗಾಗಿ ಮೂರ್ಛಹೋದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಕೂಡಲೇ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಶ್ರೀದೇವಿ ಅವರು ಮೃತಪಟ್ಟರು.

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ಮೃತಪಟ್ಟ ಘಟನೆ ತಿಳಿದು ಗ್ರಾಮಸ್ಥರು ಮರುಗಿದ್ದು, ಅಣ್ಣ-ತಂಗಿಯ ಅಪರೂಪದ ಬಾಂಧವ್ಯ ಸಾವಿನಲ್ಲೂ ಒಂದಾದಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...