ಬೆಳಗಾವಿ | ಎರಡು ದಿನಗಳಲ್ಲಿ ಎರಡು ಬಾಲ್ಯ ವಿವಾಹ ತಡೆದ ಅಕ್ಕ ಪಡೆ

Date:

ಬೆಳಗಾವಿ ನಗರದಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗೆ ರಚಿಸಲಾದ ‘ಅಕ್ಕ ಪಡೆ’ ಕೇವಲ ಎರಡು ದಿನಗಳ ಅಂತರದಲ್ಲಿ ಎರಡು ಬಾಲ್ಯ ವಿವಾಹಗಳನ್ನು ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.

- Advertisement -

ಬಾಲ್ಯ ವಿವಾಹ ಅಪರಾಧ ಎಂಬುದು ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಅಲರ್ಟ್ ಆದ ಅಕ್ಕ ಪಡೆ 13 ಹಾಗೂ 17 ವರ್ಷದ ಇಬ್ಬರು ಬಾಲಕಿಯರನ್ನು ರಕ್ಷಿಸಿದೆ. ಅಕ್ಕ ಪಡೆಯ ಕಾರ್ಯಕ್ಕೆ ನಗರ ಪೊಲೀಸ್‌ ಆಯುಕ್ತ ಭೂಷಣ್‌ ಬೊರಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
1001732931

ನಗರದ ವಂಟಮೂರಿ ಕಾಲೊನಿಯಲ್ಲಿ 17 ವರ್ಷದ ಬಾಲಕಿಯ ಮದುವೆಗೆ ಪೋಷಕರು ಸಿದ್ಧತೆ ನಡೆಸಿದ್ದರು. ಅದೇ ಮಾರ್ಗದಲ್ಲಿ ಗಸ್ತು ತಿರುಗುತ್ತಿದ್ದ ಅಕ್ಕ ಪಡೆ ಸಿಬ್ಬಂದಿ ಕಾರ್ಯಕ್ರಮದ ಬಗ್ಗೆ ಪರಿಶೀಲನೆ ನಡೆಸಿದ ವೇಳೆ ಬಾಲ್ಯ ವಿವಾಹ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಮದುವೆ ನಿಲ್ಲಿಸಿ ಬಾಲಕಿಯನ್ನು ರಕ್ಷಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಶಹಾಪುರದಲ್ಲಿ 13 ವರ್ಷದ ಬಾಲಕಿಯ ಮದುವೆ ನಡೆಯುತ್ತಿರುವ ಮಾಹಿತಿ ದೊರಕುತ್ತಿದ್ದಂತೆ ಅಕ್ಕ ಪಡೆ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಾಲ್ಯ ವಿವಾಹ ತಡೆದಿದೆ.

Advertisements

ಈ ಎರಡು ಪ್ರಕರಣಗಳಲ್ಲಿ ಬಾಲಕಿಯರ ತಂದೆಯರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ರಕ್ಷಿಸಲಾದ ಇಬ್ಬರು ಬಾಲಕಿಯರಿಗೆ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ನೀಡಲಾಗಿದೆ.

ಬೆಳಗಾವಿ ನಗರದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಫೆಬ್ರವರಿ 17ರಿಂದ ಅಕ್ಕ ಪಡೆ ಕಾರ್ಯಾಚರಣೆ ಆರಂಭಿಸಿದೆ. ಶಾಲೆ, ಕಾಲೇಜು, ಬಸ್‌ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುತ್ತಿರುವ ಅಕ್ಕ ಪಡೆ ಕಿಡಿಗೇಡಿಗಳಿಗೆ ನಡುಕ ಹುಟ್ಟಿಸುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್‌ ಆಯುಕ್ತ ಭೂಷಣ್ ಬೊರಸೆ, ಅಕ್ಕ ಪಡೆ ಎರಡು ಶಿಫ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಿಎಸ್‌ಐ ಹುದ್ದೆಯ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ಸ್ ಒಳಗೊಂಡ ತಂಡ ಶಾಲಾ-ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರ ಸುರಕ್ಷತೆ ಕುರಿತು ಜಾಗೃತಿ ಮೂಡಿಸುತ್ತಿದೆ.
ಎರಡು ದಿನಗಳಲ್ಲಿ ಎರಡು ಬಾಲ್ಯ ವಿವಾಹ ತಡೆದು ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...