ಬೆಳಗಾವಿ | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪುತ್ರ: ತಾಯಿಯನ್ನು ಮನೆಗೆ ಕರೆದುಕೊಂಡು ಹೋದ

Date:

ಹೆತ್ತ ತಾಯಿಯನ್ನು ನಡುರಾತ್ರಿ ಬೀದಿಗೆ ಎಸೆದು ಪರಾರಿಯಾಗಿದ್ದ ಪುತ್ರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಆತ ತನ್ನ ತಾಯಿಯನ್ನು ಮತ್ತೆ ಮನೆಗೆ ಕರೆದುಕೊಂಡು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಅನಾರೋಗ್ಯ ಪೀಡಿತ ವೃದ್ಧೆ ಕಮಲಮ್ಮ ಕಟ್ಟಿ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ನಿವಾಸಿಯಾಗಿರುವ ಕಮಲಮ್ಮ ಅವರನ್ನು ಪುತ್ರ ಸಂತೋಷ್ ಕಟ್ಟಿ ನಡುರಾತ್ರಿ ಗುಡ್ಡಗಾಡು ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ರಾತ್ರಿ ಪೂರ್ತಿ ಅಲ್ಲೇ ಕಳೆದಿದ್ದ ವೃದ್ಧೆ, ಮರುದಿನ ಬೆಳಿಗ್ಗೆ ಕಣ್ಣೀರು ಹಾಕುತ್ತಾ ತನ್ನ ನೋವನ್ನು ಹೇಳಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೊ ಕಂಡ ಸಾರ್ವಜನಿಕರು ಪುತ್ರನ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೆಎಸ್‌ಆರ್‌ಟಿಸಿ ನೌಕರನಾಗಿರುವ ಸಂತೋಷ್‌ ಕಟ್ಟಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿದ್ದವು. ವಕೀಲ ಮಲ್ಲಿಕಾರ್ಜುನ ಚೌಕಾಶಿ ಅವರು ಚಿಕ್ಕೋಡಿ ವಿಭಾಗೀಯ ವ್ಯವಸ್ಥಾಪಕರಿಗೆ ದೂರು ಸಲ್ಲಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ಸಾರ್ವಜನಿಕ ಒತ್ತಡ ಮತ್ತು ವ್ಯಾಪಕ ಟೀಕೆಗಳ ನಡುವೆ ಸಂತೋಷ್ ಕಟ್ಟಿ ತನ್ನ ತಾಯಿಯನ್ನು ವಾಪಸ್‌ ಮನೆಗೆ ಕರೆದುಕೊಂಡು ಹೋಗಿದ್ದು, ಈ ಬೆಳವಣಿಗೆಗೆ ಸ್ಥಳೀಯರು ಸ್ವಾಗತ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...