ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಬೆಳಗಾವಿ |ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: