2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ನೀಡಲಾಗುವ ರಾಜ್ಯಮಟ್ಟದ ಉತ್ತಮ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ನಿಂಗಪ್ಪ ಕುರುಬರ ಅವರು ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಉತ್ತಮ ಸೇವೆ ಸಲ್ಲಿಸುತ್ತಿರುವ 2 ಪ್ರಾಂಶುಪಾಲರು ಹಾಗೂ 8 ಉಪನ್ಯಾಸಕರನ್ನು ರಾಜ್ಯಮಟ್ಟದ ಉತ್ತಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ನಿಂಗಪ್ಪ ಕುರುಬರ ಅವರೂ ಸ್ಥಾನ ಪಡೆದಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರನ್ನು ರಾಜ್ಯಮಟ್ಟದ ಉತ್ತಮ ಗುಣಮಟ್ಟದ ಉಪನ್ಯಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಿಂಗಪ್ಪ ಕುರುಬರ ಅವರ ಆಯ್ಕೆಗೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ವಲಯದವರು ಅಭಿನಂದನೆ ಸಲ್ಲಿಸಿದ್ದಾರೆ.




