ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ನಡೆಯಲಿರುವ ಯಲ್ಲಮ್ಮನ ಜಾತ್ರೆ ನಿಮಿತ್ಯ ಜಿಲ್ಲಾಡಳಿತದಿಂದ ಮೂಲ ಸೌಕರ್ಯಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಎಚ್ ಕೆ ಪಾಟೀಲ್, “ಭರತ ಹುಣ್ಣಿಮೆ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ಬೃಹತ್ ಜಾತ್ರೆ ನಡೆಯಲಿದ್ದು, 10 ಲಕ್ಷಕ್ಕೂ ಅಧಿಕ ಭಕ್ತರು ಸೇರಲಿದ್ದಾರೆ. ಈ ಬಾರಿ ಜಿಲ್ಲಾಡಳಿತದ ವತಿಯಿಂದ ಭಕ್ತರಿಗೆ ಹೆಚ್ಚಿನ ಮೂಲಸೌಕರ್ಯ ಕಲ್ಪಿಸಲು ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು. ಜನಸಂದಣಿ ನಿರ್ವಹಿಸುವ ಜತೆಗೆ, ದೇವಿ ದರ್ಶನಕ್ಕಾಗಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು’ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಯಲ್ಲಮ್ಮದೇವಿ ದೇವಸ್ಥಾನ ಬಂದ್ ಆಗಿಲ್ಲ
ಯಲ್ಲಮ್ಮನ ಗುಡ್ಡದಲ್ಲಿ ಭಕ್ತರು ಬಯಲು ಶೌಚಕ್ಕೆ ಹೋಗುವ ಸಮಸ್ಯೆ ಗಂಭೀರವಾಗಿ ಪರಿಗಣಿಸಿದ್ದು. ಭಕ್ತರ ಸಂಖ್ಯೆಗೆ ತಕ್ಕಂತೆ ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು’ ಹಾಗೂ ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲೇ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.