ಬೆಳಗಾವಿ | SIR ಕಾರ್ಯದ ಒತ್ತಡವೇ ಶಿಕ್ಷಕರ ಸಾವಿಗೆ ಕಾರಣ? ಕುಟುಂಬದ ಆರೋಪ

Date:

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಾವಿಗೆ SIR ಕೆಲಸದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

ಮೃತ ಶಿಕ್ಷಕರನ್ನು ಅಥಣಿ ಪಟ್ಟಣದ ನಿವಾಸಿ ಪ್ರಕಾಶ್ ಕಾಂಬಳೆ ಎಂದು ಗುರುತಿಸಲಾಗಿದೆ. ಅವರು ರಾಯಬಾಗ ತಾಲೂಕಿನ ನಿಲಜಿ ಗ್ರಾಮದ ಪಡದಾಳೆ ತೋಟದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕುಟುಂಬಸ್ಥರ ಪ್ರಕಾರ, ಕಳೆದ ಕೆಲವು ದಿನಗಳಿಂದ SIR ಕಾರ್ಯದ ಒತ್ತಡ ಹೆಚ್ಚಾಗಿದ್ದು, ಪ್ರತಿದಿನ ಮನೆಗೆ ಬಂದ ಬಳಿಕವೂ ಕೆಲಸ ಮುಗಿಸಬೇಕಿದೆ ಎಂದು ಪ್ರಕಾಶ್‌ ಆತಂಕ ವ್ಯಕ್ತಪಡಿಸುತ್ತಿದ್ದರು. ರಾತ್ರಿ ತಡರವರೆಗೆ ಕೆಲಸ ಮಾಡುತ್ತಿದ್ದ ಅವರು, ಕೆಲಸದ ಒತ್ತಡದಿಂದ ಮಾನಸಿಕವಾಗಿ ಬಳಲುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಲೋ ಬಿಪಿ (Low BP) ಸಮಸ್ಯೆಯಿಂದ ಪ್ರಕಾಶ್‌ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ನಿರಂತರ ಕೆಲಸದ ಒತ್ತಡವೇ ಅವರ ಆರೋಗ್ಯ ಹದಗೆಡಲು ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಪ್ರಕಾಶ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಪಟ್ಟಣದ ಮುಗಿಲು ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಧು-ಬಳಗ ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಅಧಿಕೃತ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆಯಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...