ಬೆಳಗಾವಿ ನಗರದ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (ವಯಸ್ಸು 20) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಬೆಳಗಾವಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಪ್ರಜ್ವಲ್ ಮಂಗಳವಾರ ಕಾಲೇಜಿಗೆ ಹೋಗದೆ ರೂಮಿನಲ್ಲೇ ಇದ್ದ ಎನ್ನಲಾಗಿದ್ದು, ಸಂಜೆ ಸ್ನೇಹಿತನು ಬಂದು ಬಾಗಿಲು ತಟ್ಟಿದಾಗ ಪ್ರತಿಕ್ರಿಯೆ ಬರಲಿಲ್ಲ. ಶಂಕಿತ ಸ್ಥಿತಿಯಲ್ಲಿ ಕಿಟಕಿಯಿಂದ ಒಳಗೆ ನೋಡಿದಾಗ ಪ್ರಜ್ವಲ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಪೋಸ್ಟ್ಮಾರ್ಟಮ್‌ಗೆ ಬಿಮ್ಸ್ ಆಸ್ಪತ್ರೆಗೆ ಕಳುಹಿಸಲಾಯಿತು.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.