ಬೆಳಗಾವಿ | ವಿದ್ಯಾರ್ಥಿ ಆತ್ಮಹತ್ಯೆ – ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

Date:

ಬೆಳಗಾವಿ ನಗರದ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

- Advertisement -

ಮೃತಪಟ್ಟ ವ್ಯಕ್ತಿಯನ್ನು ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (ವಯಸ್ಸು 20) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಬೆಳಗಾವಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರಜ್ವಲ್ ಮಂಗಳವಾರ ಕಾಲೇಜಿಗೆ ಹೋಗದೆ ರೂಮಿನಲ್ಲೇ ಇದ್ದ ಎನ್ನಲಾಗಿದ್ದು, ಸಂಜೆ ಸ್ನೇಹಿತನು ಬಂದು ಬಾಗಿಲು ತಟ್ಟಿದಾಗ ಪ್ರತಿಕ್ರಿಯೆ ಬರಲಿಲ್ಲ. ಶಂಕಿತ ಸ್ಥಿತಿಯಲ್ಲಿ ಕಿಟಕಿಯಿಂದ ಒಳಗೆ ನೋಡಿದಾಗ ಪ್ರಜ್ವಲ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಪೋಸ್ಟ್ಮಾರ್ಟಮ್‌ಗೆ ಬಿಮ್ಸ್ ಆಸ್ಪತ್ರೆಗೆ ಕಳುಹಿಸಲಾಯಿತು.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...