ಬೆಳಗಾವಿ | ನೀಟ್ ಅಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ

Date:

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಬೆಳಗಾವಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಯುವ ಮುಖಂಡ ಅಮನ್‌ ಸೇ‌ರ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಐನೂರಕ್ಕೂ ಅಧಿಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಆತ್ಮಹತ್ಯೆಗೆ ಶರಣಾದ 20 ವಿದ್ಯಾರ್ಥಿಗಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...