ಬೆಳಗಾವಿ | ಹೆಚ್ಚುವರಿ ಬಸ್‌ಗಾಗಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ, ವೆಂಕಟಾಪೂರ ಹಾಗೂ ದಾಡಿಬಾವಿ ಗ್ರಾಮದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಸಾಲಾಪೂರದಿಂದ ಲೋಕಾಪೂರ ಪಟ್ಟಣಕ್ಕೆ ಶಾಲೆ ಹಾಗೂ ಕಾಲೇಜಿಗೆ ತೆರಳಲು ಪ್ರತಿದಿನ ಬೆಳಿಗ್ಗೆ ಕೇವಲ ಒಂದು ಬಸ್ ಮಾತ್ರ ಸಂಚರಿಸುತ್ತಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಿಕ್ಷಣ ಸಂಸ್ಥೆಗಳಿಗೆ ತಲುಪಲು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ವಿದ್ಯಾರ್ಥಿಗಳು 2025ರ ನವೆಂಬರ್ ತಿಂಗಳಲ್ಲಿಯೇ ಇದೇ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಿ ಸಾರಿಗೆ ಸಂಸ್ಥೆಗೆ ಮನವಿ ಸಲ್ಲಿಸಿದ್ದರು. ಆದರೆ ಹಲವು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತೆ ರಸ್ತೆಗಿಳಿದು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಂಸ್ಥೆಯ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ನಾಳೆಯಿಂದಲೇ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲಾಗುವುದು ಎಂದು ಲಿಖಿತ ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ತಿಳಿಗೊಂಡಿತು. ವಿದ್ಯಾರ್ಥಿಗಳ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸುವಂತೆ ಸಾರ್ವಜನಿಕರೂ ಆಗ್ರಹಿಸಿದರು.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರ ಸಭೆಯಿಂದ ಹೊರನಡೆದದ್ದು ಯಾಕೆ ಬಿಜೆಪಿ ಶಾಸಕರು?

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಬೆಳಗಾವಿ | ಅ. 29ರ ಸಭೆಯತ್ತ ಕಬ್ಬುಬೆಳೆಗಾರರ ಚಿತ್ತ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ...