ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ನಾಗರ ಪಂಚಮಿ ಹಬ್ಬದ ಅಂಗವಾಗಿ ಷೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸಲಾಗುವುದು ಎಂದು ಕಾರ್ಖಾನೆಯ ಅಧ್ಯಕ್ಷ ಮಹಾದೇವಪ್ಪ ಯಾದವಾಡ ತಿಳಿಸಿದ್ದಾರೆ.
ಬುಧವಾರ ಖಾನಪೇಟೆಯ ಆಡಳಿತ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿರುವ ಕಾರ್ಖಾನೆಯ ಷೇರುದಾರರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
‘ಅ’ ವರ್ಗದ ಷೇರುದಾರರಿಗೆ ಒಂದು ಕ್ವಿಂಟಲ್ ಹಾಗೂ ‘ಡ’ ವರ್ಗದ ಷೇರುದಾರರಿಗೆ 50 ಕೆಜಿ ಸಕ್ಕರೆಯನ್ನು ಪ್ರತಿ ಕ್ವಿಂಟಲ್‌ಗೆ ₹2,400 ರಿಯಾಯಿತಿ ದರದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್ 5ರಿಂದ 20ರವರೆಗೆ ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಕ್ಕರೆ ವಿತರಣೆ ನಡೆಯಲಿದೆ. ಷೇರುದಾರರು ಸಕ್ಕರೆ ಪಡೆಯಲು ಷೇರುಪತ್ರ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಷೇರುದಾರರು ನಿಧನರಾಗಿದ್ದಲ್ಲಿ ಅವರ ಮರಣ ಪ್ರಮಾಣ ಪತ್ರ ಸಲ್ಲಿಸಿ ಸಕ್ಕರೆ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಶಾಹೀನ್ ಅಗ್ತಾರ್ ಉಪಸ್ಥಿತರಿದ್ದರು.