ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಮುದಕವಿ ಘಾಟ್ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಸಕ್ಕರೆ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹಲಗತ್ತಿ ಗ್ರಾಮದ ಬಾಲ್ಲಪ್ಪ ಮದಕವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಮೃತರು ಹೊಸಕೋಟೆ ಗ್ರಾಮದ ಯಲ್ಲವ್ವ ಎಂದು ಗುರುತಿಸಲಾಗಿದೆ, ಅವರು ಆಸ್ಪತ್ರೆಗೆ ದಾಖಲಿಸಿದ ನಂತರ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ.