ಬೆಳಗಾವಿ | ಒಂದೇ ಕುಟುಂಬ ಮೂವರು ಆತ್ಮಹತ್ಯೆ; ಸಾವಿನ ಕಾರಣ ಬಿಚ್ಚಿಟ್ಟ ಡೆತ್‌ನೋಟ್!

Date:

ಆ ಮನೆಯ ಬಾಗಿಲು ತೆರೆದಾಗ ಹಬ್ಬಿದ ವಿಷದ ವಾಸನೆ… ನೆಲದಲ್ಲಿ ಬಿದ್ದಿದ್ದ ಮೂರು ಶವಗಳು… ಕತ್ತಲೆಯಲ್ಲಿ ತೀವ್ರ ನಿಶ್ಯಬ್ಧತೆಯ ನಡುವೆ ಮರಣದ ಮೌನದ ಧ್ವನಿ! ಮರಾಠಿ ಭಾಷೆಯ ಕಾಗದ ಸಾವಿನ ಕಾರಣವನ್ನು ಹೇಳಿದೆ.

- Advertisement -

ಬೆಳಗಾವಿ ನಗರದ ಶಹಾಪುರದ ಜೋಶಿ ಮಾಳ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ತನ್ನಿಂದ ಅರ್ಧ ಕೆ.ಜಿ ಚಿನ್ನ ಪಡೆದು ಮರಳಿ ಕೊಡದೇ ಚಿನ್ನದ ವ್ಯಾಪಾರಿ ಮೋಸ ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ (44), ಪುತ್ರಿ ಸುವರ್ಣ (42) ಮೃತಪಟ್ಟವರು. ಇನ್ನೊಬ್ಬ ಪುತ್ರಿ ಸುನಂದಾ (40) ಅವರೂ ವಿಷ ಸೇವಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬೆಳಿಗ್ಗೆ 9ರ ಸುಮಾರಿಗೆ ವಿಷ ಸೇವಿಸಿದ್ದು. ಅದಕ್ಕೂ ಮುನ್ನ ಸಂತೋಷ ಅವರು ವಿಷ ಕುಡಿದು ಸಾಯೋಣ ಎಂದು ಹೆಣ್ಣುಮಕ್ಕಳಿಗೆ ಎರಡು ತಾಸು ಮನವರಿಕೆ ಮಾಡಿ ಮೊದಲು ತಾಯಿ, ತಂಗಿಗೆ ವಿಷ ಕೊಟ್ಟು ತಾವೂ ಕುಡಿದರು. ಸುನಂದಾ ಕುಡಿಯಲು ಹಿಂಜರಿದರು. ಮೂವರೂ ಒದ್ದಾಡಿ ಸತ್ತ ಮೇಲೆ ತಾನು ಬದುಕಿದ್ದು ಏನು ಮಾಡುವುದು ಎಂಬ ಭಯದಿಂದ ಅವರೂ ವಿಷ ಕುಡಿದದ್ದಾಗಿ ಸುನಂದಾ ಹೇಳಿಕೆ ನೀಡಿದ್ದಾರೆ.

ಶವಗಳ ಮುಂದೆ ಸುನಂದಾ ಗೋಳಾಡುವುದನ್ನು ಕೇಳಿ ಅಕ್ಕಪಕ್ಕದವರು ಬಂದರು. ಅದರ ವಿಡಿಯೊ ಮಾಡಿದ ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ನಿತ್ರಾಣಗೊಂಡ ಸುನಂದಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಂತೋಷ ಅವರು ‘ಚಿನ್ನದ ಚೀಟಿ’ ವ್ಯವಹಾರ ಮಾಡುತ್ತಿದ್ದರು. ಅದರಲ್ಲಿ ಉಂಟಾದ ಮೋಸವೇ ಸಾವಿಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಸ್ಥಳ ಮಹಜರು ಮಾಡಿದ ಶಹಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ ಜೇಬಿನಲ್ಲಿ ಮರಾಠಿಯಲ್ಲಿ ಬರೆದ ಡೆತ್‌ನೋಟ್ ಪತ್ತೆಯಾಗಿದೆ ಅದರಲ್ಲಿ ಮಾನವೀಯ ಮೋಸದ ಕಪ್ಪು ಅಂಗಳವನ್ನು ಬಿಚ್ಚಿಡುವ ಅಕ್ಷರಗಳಿವೆ.

1000251253

‘ನಾನು ಬಹಳಷ್ಟು ಜನರ ಬಳಿ ಗೋಲ್ಡ್ ಚೀಟಿ (ಚಿಟ್ ಫಂಡ್ ಮಾದರಿ) ಮಾಡುತ್ತಿದ್ದೆ. ಹಲವರು ಹಣ ಹೂಡಿದ್ದರು. ವಡಗಾವಿಯ ಚಿನ್ನದ ವ್ಯಾಪಾರಿ ರಾಜು ಕುಡತರಕರ್ ಅವರಿಗೆ ಅರ್ಧ ಕೆ.ಜಿ (500 ಗ್ರಾಂ) ಚಿನ್ನ ಕೊಟ್ಟಿದ್ದೇನೆ. ಬೇರೆ ಬೇರೆ ರೀತಿಯ ಚಿನ್ನಾಭರಣ ಮಾಡಿ ಕೊಡುತ್ತೇನೆ ಅಂದಿದ್ದರು. ಮರಳಿ ಕೇಳಿದರೆ ರಾಜು ಹಾಗೂ ಅವರ ಪತ್ನಿ ನನ್ನ ಚಿನ್ನವನ್ನು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ, ಚಿನ್ನವನ್ನು ನಾನೇ ಎತ್ತಿಕೊಂಡು ಊರು ಬಿಟ್ಟು ಹೋಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇನ್ನೊಂದೆಡೆ ಹಣ ಹೂಡಿದ ಜನರೂ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನ ನೊಂದು ನಾವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಪೊಲೀಸರು ರಾಜು ಕುಡತರಕರ ಅವರಿಂದ ಚಿನ್ನವನ್ನು ಪಡೆದುಕೊಂಡು, ನಾನು ಕೊಡಬೇಕಾದ ಹಣ ಜನರಿಗೆ ನೀಡಬೇಕು. ರಾಜುಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಈ ಮೂವರ ಸಾವಿನಿಂದ ಸಮಾಜದ ಮೌನದ ಕ್ರೂರ ಹತ್ಯೆಯಾದಂತಾಗಿದೆ.

ನಿಮ್ಮ ನೋವು ಎಷ್ಟು ತೀವ್ರವಿದೆಯೋ ನಮಗೆ ಗೊತ್ತಿಲ್ಲ, ಆದರೆ ನಿಮ್ಮ ಅಸ್ತಿತ್ವ ಅನೇಕರ ಬದುಕಿಗೆ ಬೆಳಕಾಗಬೇಕು.
ಸಮಸ್ಯೆಗಳು ಕ್ಷಣಿಕ – ಆದರೆ ನೀವು ಶಾಶ್ವತ. ಒಂದು ತಪ್ಪು ನಿರ್ಧಾರ ನಿಮ್ಮ ಪ್ರೀತಿಪಾತ್ರರ ಹೃದಯವನ್ನೇ ಭಂಗಗೊಳಿಸುತ್ತದೆ ಆತ್ಮಹತ್ಯೆ ಸಮಸ್ಯೆಗಳಿಗೆ ಪರಿಹಾರವಲ್ಲ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಹುಲಿ ಪ್ರತ್ಯಕ್ಷ ಡಂಗೂರದ ಮೂಲಕ ಜನರಿಗೆ ಎಚ್ಚರಿಕೆ

ಮೋಸ, ನಂಬಿಕೆಯ ದ್ರೋಹ, ಅಪಮಾನ – ಈ ಎಲ್ಲವನ್ನೂ ಹಿಮ್ಮೆಟ್ಟಿಸಬಲ್ಲ ಶಕ್ತಿ ನಮ್ಮೊಳಗಿದೆ ಎಂಬುದನ್ನು ಸಮಾಜವು ಅರಿಯಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...