ಬೆಳಗಾವಿ | ರೋಡ್ ರೋಲರ್ ಹಿಂಬದಿಗೆ ಚಲಿಸಿ ಸೂಪರ್‌ವೈಸ‌ರ್ ಸಾವು

Date:

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ರಸ್ತೆ ರೋಲರ್‌ವೊಂದು ಆಕಸ್ಮಿಕವಾಗಿ ಹಿಂಬದಿಗೆ ಚಲಿಸಿ ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ, ಅಶೋಕ ಕಂಪನಿಯ ಸೂಪರ್‌ವೈಸ‌ರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಬೈಪಾಸ್ ರಸ್ತೆಯ ಹಳೇ ಬಸ್‌ ನಿಲ್ದಾಣದ ಸಮೀಪ ನಡೆದಿದೆ.

- Advertisement -

ಮೃತರನ್ನು ಬಸವನಬಾಗೇವಾಡಿ ಮೂಲದ ಪಾಂಡುರಂಗ ಮಧುಸೂಧನ (52) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಹಿರೇಬಾಗೇವಾಡಿಯಿಂದ ಸವದತ್ತಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಬೈಪಾಸ್‌ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಇಳಿಜಾರಿನಲ್ಲಿ ನಿಲ್ಲಿಸಲಾಗಿದ್ದ ರೋಡ್‌ ರೋಲರ್ ಏಕಾಏಕಿ ಹಿಂಬದಿಗೆ ಚಲಿಸಿದ್ದು, ಸಮೀಪದಲ್ಲಿದ್ದ ಪಾಂಡುರಂಗ ಅವರ ಮೇಲೆ ಹರಿದಿದೆ. ಘಟನೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಸುದ್ದಿ ತಿಳಿದು ಸಿಪಿಐ ಪ್ರಮೋದ ಯಲಿಗಾರ, ಪಿಎಸ್‌ಐ ವಾಹಿದ್ ಯಾದವಾಡ ಹಾಗೂ 112 ವಾಹನದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಕೂಡ ಸ್ಥಳಕ್ಕೆ ತೆರಳಿ ಅಗತ್ಯ ಸಹಾಯ ಮಾಡಿದರು.

ರೋಡ್ ರೋಲರ್ ಏಕಾಏಕಿ ಹಿಂಬದಿಗೆ ಚಲಿಸಲು ಕಾರಣವೇನು ಹಾಗೂ ವಾಹನವನ್ನು ಸುರಕ್ಷಿತವಾಗಿ ನಿಲ್ಲಿಸಲಾಗಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...