ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಬೈಲಹೊಂಗಲ ಹಾಗೂ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮಳೆಯಿಂದಾಗುವ ಯಾವುದೇ ತರಹದ ಸಮಸ್ಯೆ ಉದ್ಭವಿಸಿದ್ದಲ್ಲಿ ಜಂಟಿ ಸಮೀಕ್ಷೇಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು.
ಕಲುಷಿತ ನೀರು, ಸಾಂಕ್ರಾಮಿಕ ರೋಗಗಳು ಹರಡದಂತೆ, ಮನೆಗಳು ಬಿದ್ದು ಜೀವ ಹಾನಿಗೊಳಗಾವಂತಹದರ ಬಗ್ಗೆ ಮುಂಚಿತವಾಗಿ ತಮ್ಮ ಹಂತದಲ್ಲಿ ಸಭೆಗಳನ್ನು ಮಾಡಿ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕೆಂದರು. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಮತ್ತು ಅತಿವೃಷ್ಟಿ ಮಳೆಯ ಬಗ್ಗೆ ಜಾಗೃತಿಗಳನ್ನು ಕೈಗೊಳ್ಳಲು ಸಲಹೆ ನೀಡಿದರು.
ತಾ ಪಂ ಕಾರ್ಯ ನಿರ್ವಾಹಕ ಮಹೇಶ ಹೂಲಿ, ತಹಸೀಲ್ದಾರ್ ಹಣಮಂತ ಶಿರಹಟ್ಟಿ, ಸವದತ್ತಿ ತಾ ಪಂ ಇಒ ಆನಂದ ಬಡಕುಂದ್ರಿ ವಿವಿಧ ಇಲಾಖೆ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು