ಬೆಳಗಾವಿ | ಹೆಂಡತಿ ಮೇಲೆ ಸಂಶಯ: ನಿದ್ರೆಯಲ್ಲೇ ಕೊಚ್ಚಿ ಕೊಲೆ

Date:

ಪತ್ನಿಯ ಚಾರಿತ್ರ್ಯದ ಮೇಲೆ ಸಂಶಯಗೊಂಡ ಪತಿಯೊಬ್ಬ ಕುಡಿದ ಅಮಲಿನಲ್ಲಿ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತಳನ್ನು ಶೋಭಾ ಪರಗೊಂಡ ಸಾರವಾಡ (35) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ಪರಗೊಂಡ ಸಾರವಾಡನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಮೂಲತಃ ಖವಟಗೋಪ್ಪ ಗ್ರಾಮದವರಾದ ದಂಪತಿ ಕಳೆದ ಕೆಲವು ವರ್ಷಗಳಿಂದ ಕಟಗೇರಿ ಗ್ರಾಮದಲ್ಲಿ ವಾಸವಾಗಿದ್ದರು.

ವಿವಾಹವಾಗಿ 15 ವರ್ಷಗಳಾದರೂ ಪರಗೊಂಡ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದ್ದು, ಇದೇ ವಿಚಾರವಾಗಿ ಆಗಾಗ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Advertisements

ಶನಿವಾರ ತಡರಾತ್ರಿ ಶೋಭಾ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದ ವೇಳೆ ಕುಡಿದ ಅಮಲಿನಲ್ಲಿದ್ದ ಪರಗೊಂಡ ಮಾರಕಾಸ್ತ್ರದಿಂದ ತಲೆಗೆ ಹಾಗೂ ದೇಹದ ಭಾಗಗಳಿಗೆ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಶೋಭಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಶೋಭಾ ಕಟಗೇರಿಯ ಔಜಿಕರ ಮಠದ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ತಾಯಿಯ ಹತ್ಯೆಯಿಂದ ಕುಟುಂಬದಲ್ಲಿ ಆಕ್ರಂದನ ಮನೆಮಾಡಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರಾಮದುರ್ಗದ ಶಿವಮೂರ್ತೇಶ್ವರ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಪರಗೊಂಡ ಸಾರವಾಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...