ಬೆಳಗಾವಿ | ಸಾಕ್ಷಿದಾರನ ಅನುಮಾನಾಸ್ಪದ ಸಾವು: ಶವ ಪತ್ತೆ, ಕೊಲೆ ಶಂಕೆ

Date:

ಮೂರು ವರ್ಷಗಳ ಹಿಂದೆ ಬಾವಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಮೃತ ವ್ಯಕ್ತಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಾಟ್ ತಾಲೂಕಿನ ಕೊಸಾರಿ ಗ್ರಾಮದ ನಿವಾಸಿ ದಾದಾಸೋ ಇಮಾಗರ (56) ಎಂದು ಗುರುತಿಸಲಾಗಿದೆ. ಈತನು ತನ್ನ ಮಗ ಮತ್ತು ತಮ್ಮನನ್ನು ಸಂಬಂಧಿಕರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಹತ್ತು ಮಂದಿಯ ವಿರುದ್ಧ ದೂರು ದಾಖಲಿಸಿದ್ದನು. ಈ ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಮೂವರಿಗೆ ಜಾಮೀನು ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ನಿನ್ನೆ ಸಾಂಗ್ಲಿ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ತೆರಳುತ್ತಿದ್ದ ವೇಳೆ ನಾಗಾಜ್ ಕ್ರಾಸ್ ಬಳಿ ಅಪರಿಚಿತರು ದಾದಾಸೋ ಅವರನ್ನು ಅಪಹರಿಸಿರುವ ಬಗ್ಗೆ ಜಾಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹನಮಾಪುರ ಹೊರವಲಯದ ಮರದಲ್ಲಿ ಅವರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹದ ಕೈ ಹಾಗೂ ಬೆರಳುಗಳಲ್ಲಿ ಗಾಯದ ಗುರುತುಗಳು ಕಂಡುಬಂದಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...