ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

Date:

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ‘ಗಾಲ್ಫ್ ಸೈಡ್ ಕೆಫೆ’ಗೆ ತಲವಾರ್ ಹಾಗೂ ಜಂಬೆ ಹಿಡಿದು ನುಗ್ಗಿದ ನಾಲ್ವರು ಮುಸುಕುಧಾರಿಗಳು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

- Advertisement -

ಆಜಂ ನಗರದ ನಿವಾಸಿ ಕೈಫ್ ಶೇರಖಾನ್ (22) ಹಲ್ಲೆಗೊಳಗಾದ ಯುವಕ. ಗುರುವಾರ ರಾತ್ರಿ ಏಕಾಏಕಿ ಕೆಫೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಕೈಫ್ ಮೇಲೆ ತಲವಾರ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ ಕೆಫೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ

ಕೆಫೆಗೆ ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಆರೋಪಿಗಳ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ

ಘಟನೆಯಿಂದ ಆಕ್ರೋಶಗೊಂಡ ಕೈಫ್ ಶೇರಖಾನ್‌ ಅವರ ಸಂಬಂಧಿಕರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಎಪಿಎಂಸಿ ಪೊಲೀಸ್‌ ಠಾಣೆಯ ಎದುರು ಧರಣಿ ನಡೆಸಿದರು.

ಪ್ರತಿಭಟನಾಕಾರರನ್ನು ಭೇಟಿಯಾದ ಡಿಸಿಪಿ ನಾರಾಯಣ ಬರಮನಿ, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಪಿಎಂಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...