ಬೆಳಗಾವಿ | 10 ಲಕ್ಷ ಮೆಟ್ರಿಕ್ ಟನ್‌ ಕಬ್ಬು ಅರೆಯುವ ಗುರಿ

Date:

ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆ 2026-27ನೇ ಸಾಲಿನ 67ನೇ ಕಬ್ಬು ಅರೆಯುವ ಹಂಗಾಮಿಗೆ ಸಜ್ಜಾಗಿದ್ದು, ಈ ಬಾರಿ 10 ಲಕ್ಷ ಮೆಟ್ರಿಕ್‌ ಟನ್‌ಗೂ ಅಧಿಕ ಕಬ್ಬು ಅರೆಯುವ ಗುರಿ ಹೊಂದಲಾಗಿದೆ ಎಂದು ಕಾರ್ಖಾನೆ ಅಧ್ಯಕ್ಷ ಬಸವರಾಜ ಕಲ್ಲಟ್ಟಿ ಹೇಳಿದರು.

- Advertisement -

ಕಾರ್ಖಾನೆಯ ಯಾಂತ್ರಿಕ ವಿಭಾಗದಲ್ಲಿ ಹಂಗಾಮು ಪೂರ್ವ ಸಿದ್ಧತಾ ಕಾರ್ಯಗಳ ಅಂಗವಾಗಿ ನಡೆದ ರೂಲ‌ರ್ ಪೂಜೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ 15 ದಿನಗಳ ಮುಂಚಿತವಾಗಿ ಅರೆಯುವ ಹಂಗಾಮು ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಾಟ್ಲರ್‌ಗಳು ಸೇರಿದಂತೆ ತಾಂತ್ರಿಕ ಯಂತ್ರೋಪಕರಣಗಳ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದ್ದು, ಹಂಗಾಮು ಆರಂಭಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ,” ಎಂದು ತಿಳಿಸಿದರು.

ಕರ್ನಾಟಕ ಸರ್ಕಾರ ನೀಡಿದ್ದ ಪ್ರತಿ ಟನ್‌ಗೆ ₹50 ಪ್ರೋತ್ಸಾಹಧನವನ್ನು ಮಹಾರಾಷ್ಟ್ರದ ರೈತರಿಗೂ ಕಾರ್ಖಾನೆಯು ಪಾವತಿಸಿದೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಘೋಡಗೇರಿಯ ಗಜಲಿಂಗೇಶ್ವರ ದೇವಸ್ಥಾನ ಪೂಜಾರಿ ಶ್ರೀಕಾಂತ ಪೂಜೇರಿ, ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ, ನಿರ್ದೇಶಕರಾದ ಶಿವನಾಯಕ ನಾಯ್ಕ, ಶಿವಪುತ್ರಪ್ಪ ಶಿರಕೋಳಿ, ಪ್ರಭುದೇವ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಮಹಾದೇವಸ್ವಾಮಿ ಡಿ.ಎಸ್., ಕಾರ್ಯಾಲಯ ಅಧೀಕ್ಷಕ ಸುಭಾಷ್‌ ನಾಶಿಪುಡಿ, ಅಕೌಂಟೆಂಟ್‌ ಜನರಲ್‌ ಚಿದಾನಂದ ಮರೇದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...