ಬೆಳಗಾವಿ | ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಅಮಾನತು

Date:

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೋಷಕರು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಂಗಳವಾರ ನಡೆದಿದೆ.

- Advertisement -

ಚಿಕ್ಕೋಡಿಯ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಶೈಲ್‌ ಕುಂಬಾರ ವಿರುದ್ಧ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಕನ್ನಡ ವಿಷಯದಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿ ಹಾಗೂ ಶೌಚಾಲಯಕ್ಕೆ ಕರೆದೊಯ್ದು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೇ ರೀತಿಯ ಕಿರುಕುಳ ನೀಡಿರುವ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ. ಈ ವೇಳೆ ಶಾಲಾ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಿಕ್ಕೋಡಿ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಸೀತಾರಾಮು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆರೋಪಿ ಶಿಕ್ಷಕನನ್ನು ಕೂಡಲೇ ಅಮಾನತು ಮಾಡಲಾಗುವುದು. ಜೊತೆಗೆ ಚಿಕ್ಕೋಡಿ ಬಿಇಒ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...