ರಾಜ್ಯದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್ ಪಾವತಿಸಿವೆ, ಕೆಲವು ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಆದಷ್ಟು ಬೇಗನೆ ಪಾವತಿಯಾಗುವ ವಿಶ್ವಾಸವಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟಿಲ್ ತಿಳಿಸಿದ್ದಾರೆ.
‘ರಾಜ್ಯದಲ್ಲಿ 72 ಸಕ್ಕರೆ ಕಾರ್ಖಾನೆಗಳಿದ್ದು, ಕಬ್ಬಿನ ತೂಕ ಮಾಡಲು ಅನಲಾಗ್ ತೂಕದ ಯಂತ್ರ ಬಳಸಲಾಗುತಿತ್ತು. ಈಗ ಡಿಜಿಟಲ್ ತೂಕದ ಯಂತ್ರ ಬಳಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರವೇ ತೂಕದ ಯಂತ್ರ ಅಳವಡಿಸಲಿದೆ. ಮೊದಲ ಹಂತದಲ್ಲಿ ಎರಡು ಮೊಬೈಲ್
ತೂಕದ ಯಂತ್ರಗಳನ್ನು ಅಳವಡಿಸುತ್ತೇವೆ. ಸ್ಥಳಾವಕಾಶದ ಲಭ್ಯತೆ ಆಧರಿಸಿ ನಂತರದ ದಿನಗಳಲ್ಲಿ ಕಾರ್ಖಾನೆಗಳಲ್ಲಿ ಐದ ರಿಂದ ಆರು ಯಂತ್ರಗಳನ್ನು ಅಳವಡಿಸುತ್ತೇವೆ’ ಎಂದು ಹೇಳಿದ್ದಾರೆ.
ಈ ವರ್ಷ ರಾಜ್ಯದಾದ್ಯಂತ ಕಬ್ಬು ನುರಿಸುವಿಕೆ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಆಗಲಿದೆ. 5 ಲಕ್ಷ ಟನ್ ಕಬ್ಬು ನುರಿಸುವ ನಿರೀಕ್ಷೆಯಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.