ಬೆಳಗಾವಿ | ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆಗೊಳಗಾದ ವ್ಯಕ್ತಿ ಬಂಧನ: ಶಾಸಕರಿಂದ ಅಧ್ಯಕ್ಷನಿಗೆ ರಕ್ಷಣೆ ಆರೋಪ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದುರ್ಗಪ್ಪ ಟೋಪೊಜಿ ವಿರುದ್ಧ ಹಲ್ಲೆ ಆರೋಪ ದಾಖಲಾಗಿದ್ದರೂ ಅವರನ್ನು ಬಂಧಿಸದೇ, ಹಲ್ಲೆಗೊಳಗಾದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿರುವ ಘಟನೆ ಕಾನೂನು ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

- Advertisement -

ನಾಲೈದು ದಿನಗಳ ಹಿಂದೆ ಗ್ರಾಮ ಸಮಸ್ಯೆ ಕುರಿತು ಮಾತನಾಡಲು ಬಂದ ಹನುಮಂತ ಕರಿಕಟ್ಟಿ ಎಂಬವರ ಮೇಲೆ ಗ್ರಾಪಂ ಅಧ್ಯಕ್ಷ ದುರ್ಗಪ್ಪ ಟೋಪೊಜಿ ಅವರು ಬೆನ್ನು ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 115(2) (ಗಾಯ ಉಂಟುಮಾಡುವ ಹಲ್ಲೆ), 352 (ಉದ್ದೇಶಪೂರ್ವಕ ಹಲ್ಲೆ) ಹಾಗೂ 506 (ಬೆದರಿಕೆ) ಅಡಿ ಅಪರಾಧಕ್ಕೆ ಒಳಪಡುವುದಾಗಿ ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಆದರೆ ಹಲ್ಲೆಗೊಳಗಾದ ಹನುಮಂತ ಕರಿಕಟ್ಟಿ ನೀಡಿದ ದೂರುವನ್ನು ಪೊಲೀಸರು ಸ್ವೀಕರಿಸದೇ, ಆರೋಪಿಯಾದ ಗ್ರಾಪಂ ಅಧ್ಯಕ್ಷ ನೀಡಿದ ಪ್ರತಿದೂರುವನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ, ಯಾವುದೇ ಅರೆಸ್ಟ್ ವಾರೆಂಟ್ ಇಲ್ಲದೇ ಸಂತ್ರಸ್ತನನ್ನೇ ಬಂಧಿಸಿರುವುದು ಸಂವಿಧಾನದ ಕಲಂ 21 (ವೈಯಕ್ತಿಕ ಸ್ವಾತಂತ್ರ್ಯ) ಉಲ್ಲಂಘನೆಯಾಗುತ್ತದೆ ಎಂಬ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.

ಗ್ರಾಪಂ ಅಧ್ಯಕ್ಷ ದುರ್ಗಪ್ಪ ಟೋಪೊಜಿ ಅವರು ಕಾಂಗ್ರೆಸ್‌ ಶಾಸಕ ವಿಶ್ವಾಸ ವೈದ್ಯ ಅವರ ಆಪ್ತ ಎಂಬ ಕಾರಣಕ್ಕೆ ಪೊಲೀಸರ ರಕ್ಷಣೆಯಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದರಿಂದಾಗಿ ಪೊಲೀಸರ ನಿಷ್ಪಕ್ಷಪಾತ ತನಿಖೆ ಕುರಿತು ಸಂಶಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿವೆ.

ಈ ಸುದ್ದಿ ಓದಿದ್ದಿರಾ ? : ಬೆಳಗಾವಿ | ಯಲ್ಲಮ್ಮನ ಗುಡ್ಡದಿಂದ ಮರಳುತ್ತಿರುವಾಗ ಗುಂಡಿಗೆ ಬಿದ್ದ ಎತ್ತಿನ ಚಕ್ಕಡಿ

ಈ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಹನುಮಂತ ಕರಿಕಟ್ಟಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿ ಮಾಡಿ, ಆರೋಪಿಯಾದ ಗ್ರಾಪಂ ಅಧ್ಯಕ್ಷನ ಬಂಧನ, ಸಂತ್ರಸ್ತನ ವಿರುದ್ಧದ ಪ್ರಕರಣ ಹಿಂಪಡೆ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಎಸ್ಪಿ ಕಚೇರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...