ಬೆಳಗಾವಿ | ತನ್ನದೇ ಅಂಗಡಿಯಲ್ಲಿ ಕಳ್ಳತನ ನಾಟಕ: 65.95 ಲಕ್ಷ ರೂ. ಚಿನ್ನ-ಬೆಳ್ಳಿ ಜಪ್ತಿ

Date:

ಬೆಳಗಾವಿ ನಗರದ ರಾಮದೇವ ಗಲ್ಲಿಯಲ್ಲಿರುವ ವಿ.ಪಿ. ವೇರ್ಣೇಕ‌ರ್ ಆಂಡ್ ಸನ್ಸ್ ಬಂಗಾರದ ಅಂಗಡಿಯಲ್ಲಿ ಕಳ್ಳತನ ನಡೆದಿದೆ ಎಂದು ದೂರು ನೀಡಿದ್ದ ಅಂಗಡಿ ಮಾಲೀಕನೇ ಕಳ್ಳತನದ ನಾಟಕವಾಡಿರುವುದು ಖಡೇಬಜಾ‌ರ್ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಒಟ್ಟು 65.95 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು, ನಗದು ಹಾಗೂ ಸ್ಕೂಟಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

- Advertisement -

ಜುಲೈ 16ರ ರಾತ್ರಿ ಅಂಗಡಿಯ ಬಾಗಿಲು ಮುರಿದು ದುಷ್ಕರ್ಮಿಗಳು ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿದ್ದಾರೆ ಎಂದು ಅಂಗಡಿ ಮಾಲೀಕ ಕೃಷ್ಣಾನಂದ ವಿಶ್ವನಾಥ ವೇರ್ಣೇಕ‌ರ್ ಖಡೇಬಜಾ‌ರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಬಿಎನ್‌ಎಸ್-2023ರ ಕಲಂ 331(4) ಹಾಗೂ 305(2)ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ತನಿಖೆ ವೇಳೆ ದೂರುದಾರನೇ ಕಳ್ಳತನದ ಸಂಚು ರೂಪಿಸಿ ತನ್ನದೇ ಅಂಗಡಿಯಲ್ಲಿದ್ದ ಆಭರಣಗಳನ್ನು ಅಡಗಿಸಿ, ಕಳ್ಳತನ ನಡೆದಂತೆ ನಾಟಕವಾಡಿರುವುದು ಬಯಲಾಯಿತು. ಆರೋಪಿಯಿಂದ 519.8 ಗ್ರಾಂ ಚಿನ್ನದ ಆಭರಣಗಳು (₹62,60,990), 31 ໐ 3 ថ (₹6,000), ₹2,83,010 ನಗದು ಹಾಗೂ ₹45 ಸಾವಿರ ಮೌಲ್ಯದ ಸ್ಕೂಟಿ ಸೇರಿ ಒಟ್ಟು ₹65.95 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೂರುದಾರನೇ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...