ಬೆಳಗಾವಿ | ಮನೆಗೆ ಬೀಗ ಹಾಕಿ ಹೋಗಿದ್ದ ವೇಳೆ ಕಳ್ಳತನ: 30 ಗ್ರಾಂ ಚಿನ್ನಾಭರಣ ಕಳವು

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬೀಗ ಹಾಕಿದ ಮನೆ ಕಳ್ಳತನದ ಘಟನೆ ನಡೆದಿದೆ.

- Advertisement -

ಗ್ರಾಮದ ರಾಜು ಬಡಿಗೇರ ಅವರ ಮನೆಯ ಬೀಗ ಮುರಿದು ಕಳ್ಳರು ಸುಮಾರು 30 ಗ್ರಾಂ ಚಿನ್ನಾಭರಣ, ₹2 ಸಾವಿರ ನಗದು ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ರಾಜು ಬಡಿಗೇರ ಅವರು ಊರಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿದ್ದು, ಮನೆಗೆ ಮರಳಿ ಬಂದಾಗ ಬೀಗ ಮುರಿದಿರುವುದು ಹಾಗೂ ಮನೆಯಲ್ಲಿದ್ದ ವಸ್ತುಗಳು ಕಳುವಾಗಿರುವುದು ಬೆಳಕಿಗೆ ಬಂದಿದೆ. ಗುರುವಾರ ಘಟನೆ ಬೆಳಕಿಗೆ ಬಂದಿದ್ದು, ಮಾಹಿತಿ ತಿಳಿದ ತಕ್ಷಣ ಚಿಕ್ಕೋಡಿ ಪಿಎಸ್‌ಐ ಬಸಗೌಡ ನೇರ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.

ಮನೆಗೆ ಬೀಗ ಹಾಕಿ ದೂರದ ಊರುಗಳಿಗೆ ತೆರಳುವವರು ನೆರೆಹೊರೆಯವರಿಗೆ ಮಾಹಿತಿ ನೀಡುವುದು, ಸಿಸಿಟಿವಿ ಅಳವಡಿಸಿಕೊಳ್ಳುವುದು ಹಾಗೂ ಅಮೂಲ್ಯ ವಸ್ತುಗಳನ್ನು ಸುರಕ್ಷಿತ ಸ್ಥಳದಲ್ಲಿ ಇಡುವುದು ಸೂಕ್ತವಾಗಿದೆ. ಮನೆಗಳನ್ನು ದೀರ್ಘಕಾಲ ಖಾಲಿ ಬಿಟ್ಟು ಹೋಗುವ ಸಂದರ್ಭಗಳಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...