ಬೆಳಗಾವಿ | ಮನೆಗೆ ಕೀಲಿ ಹಾಕಿದ್ದನ್ನೇ ಬಂಡವಾಳ ಮಾಡಿಕೊಂಡ ಕಳ್ಳ: ಆರೋಪಿ ಬಂಧನ

Date:

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಭೇದಿಸಿದ್ದು, ಆರೋಪಿತನನ್ನು ಬಂಧಿಸಿ ₹5.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಕಂಕಣವಾಡಿ ಗ್ರಾಮದ ಹಾಲಸಿದ್ದೇಶ್ವರ ತೋಟದಲ್ಲಿ ಆ.15ರಂದು ದೂರುದಾರರ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾತ್ರಿ 8ರ ಸುಮಾರಿಗೆ ಕುಟುಂಬದವರೆಲ್ಲರೂ ಮನೆಗೆ ಕೀಲಿ ಹಾಕಿ ಪಕ್ಕದ ಮನೆಗೆ ತೆರಳಿದ್ದರು. ಇದನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಮುಂಬಾಗಿಲಿನ ಕೀಲಿ ಮುರಿದು ಒಳನುಗ್ಗಿ, ಬೆಡ್‌ರೂಮ್‌ನಲ್ಲಿದ್ದ ಟಿಜೋರಿಯ ಕೀಲಿಯನ್ನು ಮೀಟಿ 3.5 ತೊಲೆ ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 311/2026, 0 331(4), 305 ಬಿಎನ್‌ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್‌ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆ‌ರ್.ಬಿ. ಬಸರಗಿ ಅವರ ನಿರ್ದೇಶನದಲ್ಲಿ, ಅಥಣಿ ಡಿವೈಎಸ್‌ಪಿ ಪ್ರಶಾಂತ ಜಿ. ಮುನ್ನೋಳಿ ಮಾರ್ಗದರ್ಶನದಲ್ಲಿ ಪೊಲೀಸ್ ಇನ್‌ಸ್ಪೆಕ್ಟ‌ರ್ ಎಂ.ಎಂ. ಡಪ್ಪಿನ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ತನಿಖೆ ನಡೆಸಿ ಕಂಕಣವಾಡಿ ನಿವಾಸಿ ಅಪ್ಪಯ್ಯಾ ಸಿದ್ದಪ್ಪ ದಳವಾಯಿ (27) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದೆ. ಆರೋಪಿತನಿಂದ ₹4.50 ಲಕ್ಷ ಮೌಲ್ಯದ 3.5 ತೊಲೆ ಚಿನ್ನಾಭರಣ, ₹17 ಸಾವಿರ ನಗದು ಹಾಗೂ ₹60 ಸಾವಿರ ಮೌಲ್ಯದ ಮೋಟಾರ್‌ಸೈಕಲ್‌ ಸೇರಿದಂತೆ ಒಟ್ಟು ₹5.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ತ್ವರಿತವಾಗಿ ಪತ್ತೆಹಚ್ಚಿದ ವಿಶೇಷ ತಂಡದ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...