ಬೆಳಗಾವಿ | ಸಿಸಿ ಟಿವಿಯಲ್ಲಿ ಕಳ್ಳರ ಓಡಾಟ ಸೆರೆ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

Date:

ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿವಾಸಿಗಳು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ.

- Advertisement -

ಕಳೆದ ಎರಡು ತಿಂಗಳಲ್ಲಿ ಬಡಾವಣೆಯಲ್ಲಿ ಐದು ಕಳ್ಳತನ ಪ್ರಕರಣಗಳು ಹಾಗೂ ನಾಲ್ಕು ಕಳ್ಳತನದ ಯತ್ನಗಳು ನಡೆದಿದ್ದು, ಇತ್ತೀಚೆಗೆ ಮತ್ತೆ ಎರಡು ಕಳ್ಳತನ ಪ್ರಕರಣಗಳು ವರದಿಯಾಗಿವೆ. ಇದರಿಂದ ಈ ಪ್ರದೇಶ ಕಳ್ಳರ ಸುಲಭದ ಗುರಿಯಾಗಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಬಡಾವಣೆಯ ಮನೆಗಳ ಮುಂದೆ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಕಳ್ಳರು ಸಂಚರಿಸುತ್ತಿರುವುದು ಹಾಗೂ ಕಳ್ಳತನಕ್ಕೆ ಯತ್ನಿಸುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿವೆ. ಈ ದೃಶ್ಯಗಳನ್ನು ಪೊಲೀಸರಿಗೆ ಒದಗಿಸಿದ್ದರೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಪಿಎಂಸಿ ಪೊಲೀಸರು ವಿಫಲರಾಗಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ರಾತ್ರಿ ವೇಳೆ ಸಮರ್ಪಕ ಪೊಲೀಸ್ ಗಸ್ತು ಇಲ್ಲದಿರುವುದೇ ಕಳ್ಳರಿಗೆ ವರವಾಗಿದೆ. ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಪೊಲೀಸ್‌ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಸರಣಿ ಕಳ್ಳತನಗಳಿಂದ ಬೇಸತ್ತಿರುವ ಸಾರ್ವಜನಿಕರು, ಕುಮಾರಸ್ವಾಮಿ ಬಡಾವಣೆಯಲ್ಲಿ ರಾತ್ರಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಬೇಕು. ಸಿಸಿ ಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಇಲಾಖೆಯನ್ನು ಆಗ್ರಹಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...