ಬೆಳಗಾವಿ | ಸೋಲಾರ ಪ್ಲಾಂಟ್ ನೆಪದಲ್ಲಿ ಸಾವಿರಾರು ಮರಗಳ ಮಾರಣಹೋಮ

Date:

ಬೆಳಗಾವಿ ತಾಲೂಕಿನ ಬಡಲಾ ಅಂಕಲಗಿ ಗ್ರಾಮದಲ್ಲಿ ಸೊಲಾ‌ರ್ ಪ್ಲಾಂಟ್ ನಿರ್ಮಾಣದ ಹೆಸರಿನಲ್ಲಿ ಗುಡ್ಡವನ್ನೇ ಅಗೆಯಲಾಗಿದ್ದು, ಸಾವಿರಾರು ಮರಗಳನ್ನು ಕಡಿತಗೊಳಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.

- Advertisement -

ಕಳೆದ ಒಂದೂವರೆ ತಿಂಗಳಿಂದ ನಿರಂತರವಾಗಿ ಗುಡ್ಡ ಅಗೆಯುವ ಹಾಗೂ ಮರ ಕತ್ತರಿಸುವ ಕಾರ್ಯ ನಡೆಯುತ್ತಿದ್ದು, ಈವರೆಗೆ 40 ಎಕರೆಗೂ ಹೆಚ್ಚು ಪ್ರದೇಶ ಸಂಪೂರ್ಣ ಹಾನಿಗೊಳಗಾಗಿದೆ. ಈ ಬೆಳವಣಿಗೆ ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಂದಾಯ ಇಲಾಖೆಗೆ ಸೇರಿರುವ ಸರ್ವೇ ನಂ.359ರ ಗೈರಾಣು ಜಾಗದ 67 ಎಕರೆ ಪ್ರದೇಶದಲ್ಲಿ ಸೊಲಾ‌ರ್ ಪ್ಲಾಂಟ್ ನಿರ್ಮಾಣಕ್ಕೆ ತಹಶಿಲ್ದಾರ್ ಬಸವರಾಜ್ ನಾಗರಾಳ ಅವರು ಅನುಮತಿ ನೀಡಿರುವುದಾಗಿ ತಿಳಿದುಬಂದಿದೆ. ಪಿಎಂ ಕುಸುಮ್ ಫೀಡ‌ರ್ ಲೆವೆಲ್ ಸೊಲಾರೈಜೇಶನ್ ಯೋಜನೆಯಡಿ ಹೆಸ್ಕಾಂ ಹಾಗೂ ಇಂಧನ ಇಲಾಖೆಯ ಮೂಲಕ ಕಾಮಗಾರಿ ನಡೆಯುತ್ತಿದೆ.

ಆದರೆ ಈ ಪ್ರದೇಶದಲ್ಲಿ ಅರಣ್ಯ ಇರುವ ಕಾರಣ, ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಮರಗಳನ್ನು ಕಡಿತಗೊಳಿಸಿರುವ ಆರೋಪಗಳು ಕೇಳಿಬಂದಿವೆ. ಹೆಸ್ಕಾಂ ಇಲಾಖೆ ಎರಡು ತಿಂಗಳ ಹಿಂದೆ ಅನುಮತಿ ಕೋರಿ ಪತ್ರ ಬರೆದಿದ್ದರೂ, ಇದುವರೆಗೂ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ ಎನ್ನಲಾಗಿದೆ.

ಶ್ರೀಗಂಧ ಸೇರಿದಂತೆ ಅಮೂಲ್ಯ ಮರಗಳಿದ್ದ ಕಾಡನ್ನು ಯಾರ ಗಮನಕ್ಕೂ ಬರದಂತೆ ತರಾತುರಿಯಲ್ಲಿ ನಾಶ ಮಾಡಿರುವುದರ ಹಿಂದೆ ಯಾರು ಇದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸದ್ಯ ಪ್ರಕರಣವನ್ನು ಬೆಳಗಾವಿ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...