ಬೆಳಗಾವಿ : ಕೋಣೆಯಲ್ಲಿ ಬೆಚ್ಚಗಿರಲು ಬೆಂಕಿ ಹಾಕಿ ಮಲಗಿದ ನಾಲ್ವರಲ್ಲಿ ಮೂವರು ಉಸಿರುಗಟ್ಟಿ ಸಾವು

Date:

ಬೆಳಗಾವಿ ನಗರದ ಅಜಾದ್ ನಗರದಲ್ಲಿ ನಡೆದ ದಾರುಣ ಘಟನೆ ಒಂದರಲ್ಲಿ, ಚಳಿಯಿಂದ ರಕ್ಷಣೆ ಪಡೆಯಲು ಇದ್ದಿಲಿನ ಬೆಂಕಿ ಇಟ್ಟುಕೊಂಡು ಕೋಣೆಯಲ್ಲಿ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.

- Advertisement -

ಮೃತರಾದವರು ರಿಹಾನ್ (22), ಮೋಹಿನ್ ನಾಲಬಂದ (23) ಹಾಗೂ ಸರ್ಫರಾಜ್ ಹರಪ್ಪನಹಳ್ಳಿ (22). ಗಂಭೀರ ಸ್ಥಿತಿಯಲ್ಲಿರುವ ಯುವಕ ಶಾಹನವಾಜ್ (19) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಮರಳಿದ್ದ ಯುವಕರು, ತೀವ್ರ ಚಳಿಯಿಂದಾಗಿ ಇದ್ದಿಲು ಕಾಯಿಸಿ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಹೊಗೆ ತುಂಬಿ ಆಮ್ಲಜನಕದ ಕೊರತೆ ಉಂಟಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಧಾವಿಸಿದ ಮಾಳಮಾರುತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯ ಶಾಸಕ ಆಸೀಫ್ ಸೇಠ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...