ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ದಿನೇದಿನೇ ಹೆಚ್ಚಾಗುತ್ತಿದೆ. ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಹಾಗೂ ಗುಡುಗು ಸಹಿತ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಯಿತು.
ಸಂಜೆ ಆರಂಭವಾದ ಭಾರಿ ಗಾಳಿ-ಮಳೆಯಿಂದ ಗ್ರಾಮದ ಹಲವು ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿದವು. ಪರಿಣಾಮ ಕೆಲಕಾಲ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆಗಳ ಮೇಲೆಯೇ ಮರಗಳು ಬಿದ್ದಿದ್ದರಿಂದ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಯ ನಂತರ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸಹಜವಾಯಿತು. ಬಳಿಕ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ರಸ್ತೆ ಮೇಲೆ ಬಿದ್ದಿದ್ದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮೂರು ವರ್ಷಗಳ ಹಿಂದೆಯೇ ಮದುವೆ, ಈಗ ಮತ್ತೊಬ್ಬನ ಜೊತೆ ವಿವಾಹಕ್ಕೆ ಸಿದ್ಧತೆ ಆರೋಪ
ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಜೋರಾದ ಮಳೆ ಮತ್ತು ಬಿರುಗಾಳಿ ಸಾಮಾನ್ಯವಾಗುತ್ತಿದೆ. ಮಳೆಯಿಗಿಂತಲೂ ಬಿರುಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದವು



