ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಲಕರಂಜಿ ಅಂತರರಾಜ್ಯ ಹೆದ್ದಾರಿಯ ಅಕೋಲಾ ಗ್ರಾಮದ ಸಂತುಬಾಯಿ ದೇವಸ್ಥಾನದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ, ಭೋಜ್ ಗ್ರಾಮದಿಂದ ಮೂವರು ಬೈಕ್‌ನಲ್ಲಿ ನಿಪ್ಪಾಣಿಗೆ ಬರುತ್ತಿದ್ದರು. ಇದೇ ವೇಳೆ, ಅಕೋಲಾ ಗ್ರಾಮದ ಅಣ್ಣಾಸಾಹೇಬ್ ಉಪಾಧ್ಯಾಯ ಮಮದಾಪುರ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಸಂತೆಬಾಯಿ ದೇವಸ್ಥಾನದ ಬಳಿ ಬಂದು ಸೇರಿದಾಗ ಎರಡೂ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ನಿಪ್ಪಾಣಿ ತಾಲೂಕಿನ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.