ಬೆಳಗಾವಿ ನಗರದ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಸಂಭವಿಸಿದೆ.
ಶಿವಂ ಪರಶುರಾಮ ಸುಂಡೀಕರ್ (07), ಪರಶುರಾಮ ನಿಲಜಕರ್ (11) ಮೃತ ದುರ್ದೈವಿಗಳು. ಭಾನುವಾರ ಬೆಳಿಗ್ಗೆ ನಗರದ ಕಪಿಲೇಶ್ವರ ಹೊಂಡದಲ್ಲಿ ಈಜಲು ಇಬ್ಬರು ತೆರಳಿದ್ದರು. ಈ ವೇಳೆ ನೀರಿನ ಆಳ ಅರಿಯದೆ ಮುಳುಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡರು. ಈ ವೇಳೆ ಇಬ್ಬರು ಬಾಲಕರ ಮೃತದೇಹವನ್ನು ಹೊಂಡದಿಂದ ಹೊರತಗೆಯಲಾಗಿದೆ.
ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದವ ಆಕ್ರಂದನ ಮುಗಿಲು ಮುಟ್ಟಿದೆ.



