ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳಿಯರನ್ನು ಬಂಧಿಸುವಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಹೇಮಾ ಕಸಬೇಕರ್ ಹಾಗೂ ನೀಲಂ ಕಾಂಬಳೆ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಅಥಣಿ ಬಸ್ ನಿಲ್ದಾಣದಲ್ಲಿ ಬಂಗಾರದ ಆಭರಣ ಕಳವು ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ಮಾಹಿತಿ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



