ಬೆಳಗಾವಿ | ಒಂದು ಲಕ್ಷಕ್ಕೆ ಎರಡು ಲಕ್ಷ: ಖೋಟಾ ನೋಟು ಗ್ಯಾಂಗ್‌ ಬಂಧನ

Date:

ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಗೋವಾ ಮೂಲದ ಗ್ಯಾಂಗ್‌ನ ನಾಲ್ವರನ್ನು ಬೆಳಗಾವಿ ಪೊಲೀಸರು ಬಂಧಿಸಿ, ₹2.40 ಲಕ್ಷ ಮುಖಬೆಲೆಯ ನೋಟುಗಳನ್ನು ಜಪ್ತಿ ಮಾಡಿದ್ದಾರೆ.

- Advertisement -

ಬಂಧಿತರನ್ನು ಮೊಹಮ್ಮದ್ ಅರ್ಬಾಜ್ (21), ರೂಪೇಶ್ ವಾಕೋಡೆ (26), ಮೊಹಮ್ಮದ್ ಹುಸೇನ್ ಭಕ್ಷಿ (23) ಹಾಗೂ ಶ್ರವಣಕುಮಾರ (25) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಂದು ಕಾರು ಹಾಗೂ ನಾಲ್ಕು ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ₹1 ಲಕ್ಷ ಅಸಲಿ ಹಣಕ್ಕೆ ₹2 ಲಕ್ಷ ಖೋಟಾ ನೋಟುಗಳನ್ನು ನೀಡುವ ಮೂಲಕ ದಂಧೆ ನಡೆಸುತ್ತಿದ್ದರು. ಖಡೇಬಜಾರ್‌ನ ಅಂಗಡಿಯಲ್ಲಿ ನೋಟು ಚಲಾವಣೆಗೆ ಯತ್ನಿಸಿದ ವೇಳೆ ಅಂಗಡಿ ಮಾಲೀಕನಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದ ಹಿನ್ನಲೆಯಲ್ಲಿ ದೊಡ್ಡ ಜಾಲವಿರುವುದು ಬೆಳಕಿಗೆ ಬಂದಿದ್ದು, ಗೋವಾದ ಜೈಲಿನಲ್ಲಿ ಇರುವ ಮೊಹಮ್ಮದ್ ಸರ್ಫರಾಜ್‌ ಈ ದಂಧೆಯ ಪ್ರಮುಖ ಸೂತ್ರಧಾರನಾಗಿರುವ ಶಂಕೆ ವ್ಯಕ್ತವಾಗಿದೆ. ಆತ ಜೈಲಿನಿಂದಲೇ ಫೋನ್ ಮೂಲಕ ದಂಧೆ ನಿಯಂತ್ರಿಸುತ್ತಿದ್ದನೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮನೆ ಕಳ್ಳತನ ಪ್ರಕರಣ: ಇಬ್ಬರು ಬಂಧನ, ₹4.59 ಲಕ್ಷ ಮೌಲ್ಯದ ಆಭರಣ ವಶ

ಈ ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಖೋಟಾ ನೋಟು ಪೂರೈಕೆ ಮಾಡಿದ ಅಪರಿಚಿತ ವ್ಯಕ್ತಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...