ಬೆಳಗಾವಿ | ಸಾಲಬಾಧೆ ತಾಳಲಾರದೆ ನೇಕಾರ ಕಾರ್ಮಿಕ ಆತ್ಮಹತ್ಯೆ

Date:

ಸಾಲಬಾಧೆ ತಾಳಲಾರದೆ ನೇಕಾರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಖಾಸಬಾಗ್‌ನ ಕುಂತಿನಗರದಲ್ಲಿ ನಡೆದಿದೆ.

- Advertisement -

ಕುಂತಿನಗರ ನಿವಾಸಿ ವಿವೇಕಾನಂದ ಮಹಾದೇವ ಬುಚಡಿ (32) ಆತ್ಮಹತ್ಯೆ ಮಾಡಿಕೊಂಡ ನೇಕಾರ ಕಾರ್ಮಿಕ. ಮನೆಯಲ್ಲಿ ಎರಡು ಮಗ್ಗಗಳನ್ನು ಇಟ್ಟುಕೊಂಡು ನೇಕಾರಿಕೆ ಕೆಲಸ ಮಾಡುತ್ತಿದ್ದ ಅವರು, ಉದ್ಯೋಗ ಸರಿಯಾಗಿ ನಡೆಯದ ಕಾರಣ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವ ಚಿಂತೆ ಅವರನ್ನು ಕಾಡುತ್ತಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ಮೃತ ವಿವೇಕಾನಂದ ಅವರಿಗೆ ಪತ್ನಿ ಗೌರಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಒಬ್ಬ ಮಗನಿಗೆ ಐದು ವರ್ಷವಾಗಿದ್ದು, ಇನ್ನೊಂದು ಮಗು ಕೇವಲ ಒಂದೂವರೆ ತಿಂಗಳಾಗಿದೆ. ತಂದೆ-ತಾಯಿ ಹಾಗೂ ಸಹೋದರನ ಕುಟುಂಬದೊಂದಿಗೆ ಅವರು ವಾಸವಾಗಿದ್ದರು.

ಸಾಲದ ಚಿಂತೆಯಿಂದ ಆರೋಗ್ಯ ಹದಗೆಟ್ಟಿತ್ತು ಮೃತನ ತಾಯಿ ಭಾರತಿ ಮಹಾದೇವ ಬುಚಡಿ ಅವರು ನೀಡಿದ ಹೇಳಿಕೆಯ ಪ್ರಕಾರ, ವಿವೇಕಾನಂದ ಅವರು ನೇಕಾರಿಕೆ ಕೆಲಸ ಸರಿಯಾಗಿ ನಡೆಯದ ಕಾರಣ ಸಾಲ ಮಾಡಿಕೊಂಡಿದ್ದರು. ಸಾಲವನ್ನು ಹೇಗೆ ತೀರಿಸಬೇಕು ಎಂದು ಸದಾ ಚಿಂತಿಸುತ್ತಿದ್ದರು. ಸರಿಯಾಗಿ ಊಟ ಮಾಡದೆ, ನಿದ್ರೆ ಮಾಡದೆ ಮನಸ್ಸಿಗೆ ಹಚ್ಚಿಕೊಂಡು ಬೇಸರದಲ್ಲಿದ್ದರು. ಕುಟುಂಬದವರು ಹಲವು ಬಾರಿ ಸಮಾಧಾನಪಡಿಸಿ, ಹೇಗಾದರೂ ದುಡಿದು ಸಾಲ ತೀರಿಸೋಣ ಎಂದು ಧೈರ್ಯ ಹೇಳಿದ್ದರು. ಆದರೆ ಸಾಲದ ಚಿಂತೆಯಿಂದ ಅವರ ಆರೋಗ್ಯ ಹದಗೆಟ್ಟಿತ್ತು. ನಾಲ್ಕೈದು ದಿನಗಳ ಹಿಂದೆ ಶುಗರ್ ಕಡಿಮೆಯಾಗಿ ಫಿಟ್ಸ್ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ನವೆಂಬರ್ 24ರಂದು ಸಂಜೆ 6 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಮನೆಗೆ ಬಂದ ವಿವೇಕಾನಂದ ಅವರು ವಿಶ್ರಾಂತಿ ಪಡೆಯಲು ತಮ್ಮ ಕೋಣೆಯಲ್ಲಿ ಮಲಗಿದ್ದರು. ರಾತ್ರಿ 9.45ರ ಸುಮಾರಿಗೆ ತಾಯಿ ದೂರವಾಣಿ ಕರೆ ಮಾಡಿ ಊಟ ಮಾಡಿ ಮಾತ್ರೆ ತೆಗೆದುಕೊಂಡು ಮಲಗುವಂತೆ ತಿಳಿಸಿದ್ದರು. ಅದಕ್ಕೆ ಅವರು ಊಟ ಮಾಡಿ ಮಲಗುವುದಾಗಿ ಹೇಳಿದ್ದರು. ಆದರೆ ರಾತ್ರಿ 10.30ರ ಸುಮಾರಿಗೆ ಸಹೋದರ ನಾಗರಾಜ ಅವರು ತಾಯಿಗೆ ಕರೆ ಮಾಡಿ ವಿವೇಕಾನಂದ ಕೋಣೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದರು. ತಕ್ಷಣ ಮನೆಗೆ ಬಂದ ಕುಟುಂಬದವರು ನೋಡಿದಾಗ ವಿವೇಕಾನಂದ ಮೃತಪಟ್ಟಿದ್ದರು.

ಸಾಲದ ಚಿಂತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ತಾಯಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಕಾರರಿಗೆ ಪರಿಹಾರ ನೀಡಲು ಆಗ್ರಹ

ಬೆಳಗಾವಿ ನಗರದಲ್ಲಿ ಸಾಲಬಾಧೆಯಿಂದ ನೇಕಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಮುಂದುವರಿದಿವೆ. ಕಳೆದ ಎರಡು ತಿಂಗಳಲ್ಲಿ ಇದು ಮೂರನೇ ನೇಕಾರ ಕಾರ್ಮಿಕನ ಆತ್ಮಹತ್ಯೆ ಪ್ರಕರಣವಾಗಿದೆ.
ನೇಕಾರರ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕುಟುಂಬಕ್ಕೆ ಪರಿಹಾರ ದೊರೆತಿಲ್ಲ ಎಂದು ನೇಕಾರ ಸಮುದಾಯದ ಮುಖಂಡ ರವಿ ಪಾಟೀಲ ತಿಳಿಸಿದ್ದಾರೆ.

ನೇಕಾರ ಕಾರ್ಮಿಕರ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ರವಿ ಪಾಟೀಲ ಆಗ್ರಹಿಸಿದ್ದಾರೆ.

ವಿ.ಸೂ: ಆತ್ಮಹತ್ಯೆ ಸಮಸ್ಯೆಗಳಿಗೆ ಪರಿಹಾರವಲ್ಲ

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...

ರಾಜ್ಯದ ವಿವಿದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ

ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷರು ಮತ್ತು...

ರಂಗಭೂಮಿ ನಿರ್ದೇಶಕ, ಕಲಾವಿದ ಕಲ್ಲಪ್ಪ ಪೂಜೇರ ಅವರಿಗೆ ಸನ್ಮಾನ

ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಧಾರವಾಡ...