ಬೆಳಗಾವಿ | ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ

Date:

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ, ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದ್ದ ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಇಂದು ಎಲ್ಲ ಅಪರಾಧಿಗಳಿಗೆ ತಲಾ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

- Advertisement -

ನ್ಯಾಯಾಧೀಶರಾದ ಎಚ್.ಎಸ್. ಮಂಜುನಾಥ್‌ ಅವರು ಕೋರ್ಟ್‌ ಹಾಲ್‌ನಲ್ಲೇ ವಿವಿಧ ಸೆಕ್ಷನ್‌ಗಳ ಅಡಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಪ್ರಕರಣದಲ್ಲಿ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಮತ್ತು ಶಿವಪ್ಪ ವನ್ನೂರಿ ದೋಷಿಗಳೆಂದು ಸಾಬೀತಾಗಿದ್ದು, ಪ್ರತಿಯೊಬ್ಬರೂ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೊಳಪಟ್ಟಿದ್ದಾರೆ. ಇನ್ನೋರ್ವ ಬಾಲಾಪರಾಧಿ ಕುರಿತು ವಿಚಾರಣೆ ಮುಂದವರಿದಿದೆ.

ವಂಟಮೂರಿಯಲ್ಲಿ 2023 ಡಿಸೆಂಬರ್ 11 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಪ್ರೀತಿಸಿದ ಯುವತಿಯೊಂದಿಗೆ ಯುವಕ ಮನೆ ಬಿಟ್ಟು ಪರಾರಿ ಆಗಿದ್ದಾನೆಂಬ ಕಾರಣಕ್ಕೆ ಪ್ರತೀಕಾರವಾಗಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಅಲ್ಲದೇ ಯುವಕನ ಮನೆಯನ್ನು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು. ಇದು ಇಡೀ ದೇಶಾದ್ಯಂತ ತೀವ್ರ ಟೀಕೆಗೆ ಕಾರಣವಾಗಿತ್ತು. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

2023ರ ಡಿ.16ರಂದು ಪ್ರಕರಣದ ಸಿಐಡಿಯ ಮಹಾನಿರ್ದೇಶಕರು ಹಾಗೂ ಪೊಲೀಸ್‌ ಮಹಾನಿರೀಕ್ಷಕರಿಗೆ ವಹಿಸಲಾಗಿತ್ತು. ಆಗ ಸಿಐಡಿ ವಿಶೇಷ ವಿಚಾರಣೆ ವಿಭಾಗದ ಪೊಲೀಸ್‌ ಅಧೀಕ್ಷಕರಾಗಿದ್ದ ಪೃಥ್ವಿಕ್‌ ಶಂಕರ್‌ ಅವರು ತನಿಖಾಧಿಕಾರಿಯಾಗಿ ಕೆಲಸ ಮಾಡಿ, 2024ರ ಎಪ್ರಿಲ್‌ 22ರಂದು 13 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 92 ಸಾಕ್ಷಿದಾರರನ್ನು ಉಲ್ಲೇಖಿಸುವ ಜತೆಗೆ, ವಶಕ್ಕೆ ಪಡೆದ 37 ವಸ್ತುಗಳನ್ನು ಸಾಕ್ಷ್ಯಗಳನ್ನಾಗಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್​.ಎಸ್. ಮಂಜುನಾಥ ಅವರು 12 ಆರೋಪಿಗಳು ತಪ್ಪಿತಸ್ಥರೆಂದು ನಿನ್ನೆಯಷ್ಟೇ ತೀರ್ಪು ಪ್ರಕಟಿಸಿ, ಶಿಕ್ಷೆ ಪ್ರಮಾಣವನ್ನು ಇಂದು ಕಾಯ್ದಿರಿಸಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...