ಬೆಳಗಾವಿ | ಮುಂದಿನ ವರ್ಷಕ್ಕೆ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಪೂರ್ಣ: ಶಾಸಕ ಅಶೋಕ ಪಟ್ಟಣ

Date:

ಬೆಳಗಾವಿ ಜಿಲ್ಲೆಯ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ₹30 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಹಾಲೊಳ್ಳಿ ಗ್ರಾಮದಲ್ಲಿ ₹42 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

- Advertisement -

ಈ ವೇಳೆ ಮಾತನಾಡಿದ ಅವರು, “ವೀರಭದ್ರೇಶ್ವರ ಏತ ನೀರಾವರಿ ಹಾಗೂ ಬಸವೇಶ್ವರ ಏತ ನೀರಾವರಿ ಯೋಜನೆಗಳು ರಾಮದುರ್ಗ ಭಾಗದ ರೈತರ ಸಂಕಷ್ಟ ನಿವಾರಣೆಗೆ ಪ್ರಮುಖವಾಗಿವೆ. ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

10ಕ್ಕೂ ಹೆಚ್ಚು ವರ್ಷಗಳಿಂದ ಯೋಜನೆಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿತ್ತು. ರಾಜ್ಯ ಸರ್ಕಾರದಿಂದ ₹15 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭಗೊಂಡಿದ್ದರೂ, ಹಳೆಯ ಅಂದಾಜು ಪತ್ರಿಕೆಯ ಪ್ರಕಾರ ಕಾಮಗಾರಿ ನಡೆಸಲು ಸಾಧ್ಯವಿಲ್ಲವೆಂದು ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದರು ಎಂದು ತಿಳಿಸಿದರು.

ಈ ಹಿನ್ನೆಲೆ ಮರು ಟೆಂಡರ್ ಪ್ರಕ್ರಿಯೆ ಕೈಗೊಂಡು ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಮುಂದಿನ ವರ್ಷದ ಮೇ ತಿಂಗಳೊಳಗೆ ಹಾಗೂ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಡಿಸೆಂಬ‌ರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಸನಗೌಡ ದ್ಯಾವನಗೌಡರ, ಸಂಗನಗೌಡ ಪಾಟೀಲ, ಯಲ್ಲನಗೌಡ ಪಾಟೀಲ, ಈರಪ್ಪ ಕೊಡ್ಲಿವಾಡ, ಮಲ್ಲಿಕಾರ್ಜುನ ಸಿಂಗಾರಗೊಪ್ಪ, ಬಸಪ್ಪ ಗವನ್ನವರ, ಉಮೇಶ ಕೂಡ್ಲಗೇರಿ, ಜಿ.ಬಿ. ರಂಗನಗೌಡರ ಹಾಗೂ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಎಐಐ ಮೋಹಿನ್ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...