ಬೆಳಗಾವಿ | ಪತ್ನಿಯೇ ಪತಿಯ ಹಂತಕಳಾ? 2 ಕೋಟಿ ವಿಮೆ ಹಣಕ್ಕಾಗಿ ಕೊಲೆ ಆರೋಪ

Date:

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸೈನಿಕನೊಬ್ಬನ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (45) ಅವರು ಮೂರು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ ಪತ್ನಿ ಸುಮಾ ಮಂಜರಗಿ ಹಾಗೂ ಪ್ರಿಯಕರ ಪುಂಡಲೀಕ ಸೇರಿ ಗ್ಲುಕೋಸ್ ಬಾಟಲಿಗೆ ವಿಷ ಬೆರೆಸಿ ಹತ್ಯೆ ನಡೆಸಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಅನೈತಿಕ ಸಂಬಂಧ ಬಹಿರಂಗವಾಗುವ ಭಯ ಮತ್ತು 2 ಕೋಟಿ ರೂಪಾಯಿ ವಿಮೆ ಹಣದ ಆಸೆಯಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಳಗಾವಿ ಎಸಿ ಶ್ರವಣಕುಮಾ‌ರ್ ಅವರ ಸಮ್ಮುಖದಲ್ಲಿ ಮೂರು ತಿಂಗಳ ಹಿಂದೆ ಹೂತ್ತಿದ್ದ ಶವವನ್ನು ಹೊರತೆಗೆದು ಪರಿಶೀಲನೆ ನಡೆಸಲಾಗಿದೆ. ಶವದ ಅವಶೇಷಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

ಪ್ರಕರಣದ ಸಂಬಂಧ ಸುಮಾ ಮಂಜರಗಿ ಹಾಗೂ ಪುಂಡಲೀಕನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ನಂತರ ಪ್ರಕರಣದ ಸತ್ಯಾಂಶ ಬೆಳಕಿಗೆ ಬರಲಿದ್ದು, ಜಿಲ್ಲೆಯಾದ್ಯಂತ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಸೈನಿಕನ ಸಾವಿನ ಹಿಂದೆ ವಿಮೆ ಹಣದ ಆಸೆ ಮತ್ತು ಅನೈತಿಕ ಸಂಬಂಧದ ಸಂಚು ಅಡಗಿದೆಯೇ ಎಂಬ ಪ್ರಶ್ನೆಗೆ ತನಿಖೆ ಹಾಗೂ ಎಫ್‌ಎಸ್‌ಎಲ್ ವರದಿಯೇ ಉತ್ತರ ನೀಡಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...