ಬೆಳಗಾವಿ | ರೈತರ ಆತ್ಮಹತ್ಯೆ ನಿರ್ಲಕ್ಷಿಸಿ ಉತ್ಸವ ಮಾಡಲು ಸಾಧ್ಯವಿಲ್ಲ: ಚುಕ್ಕಿ ನಂಜುಂಡಸ್ವಾಮಿ

Date:

ದೇಶದಲ್ಲಿ ಕಳೆದ ವರ್ಷ ಪ್ರತಿ ಎರಡು ಗಂಟೆಗೆ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ದಶಕದಲ್ಲೇ ಅತ್ಯಂತ ಭೀಕರ ಬರಗಾಲವಿದೆ. ಇಂತಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿ ನಾವು ಯಾವುದೇ ಉತ್ಸವ ಮಾಡಲು ಸಾಧ್ಯವಿಲ್ಲ ಎಂದು ರೈತಪರ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಹೇಳಿದರು.

- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರಿನ ರಾಣಿ ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ಶುಕ್ರವಾರ 202ನೇ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
1002619091

ಕಬ್ಬು ವಾಣಿಜ್ಯ ಬೆಳೆಯಾಗಿದ್ದರೂ ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಉಗ್ರ ಹೋರಾಟ ನಡೆಸಿದ್ದಾರೆ. ಇನ್ನು ಆಹಾರ ಧಾನ್ಯ ಬೆಳೆಯುವ ರೈತರ ಸ್ಥಿತಿ ಹೇಗಿರಬಹುದು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಕೃಷಿ ಕ್ಷೇತ್ರದ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳು ನೇರವಾಗಿ ರೈತ ಮಹಿಳೆಯರ ಮೇಲೆಯೇ ಬೀಳುತ್ತವೆ ಎಂದು ಚುಕ್ಕಿ ನಂಜುಂಡಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಕಿತ್ತೂರು ರಾಣಿ ಚನ್ನಮ್ಮ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡಿದ್ದರು. ಆದರೆ ಇಂದು ದೇಶದಲ್ಲಿ ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ಬೆಳೆದಿವೆ. ಇವೆಲ್ಲವೂ ಈಸ್ಟ್ ಇಂಡಿಯಾ ಕಂಪನಿಗಿಂತ ಭಿನ್ನವೇನೂ ಇಲ್ಲ. ಇನ್ನು ಕೆಲವೇ ದಿನಗಳಲ್ಲಿ ಸಂಸತ್ತು ಹಾಗೂ ವಿಧಾನಸಭೆಗಳು ನೆಪಕ್ಕೆ ಮಾತ್ರ ಉಳಿಯುವ ಪರಿಸ್ಥಿತಿ ಬರಬಹುದು. ಆಳುವ ಶಕ್ತಿ ಬಹುರಾಷ್ಟ್ರೀಯ ಕಂಪನಿಗಳ ತೆಕ್ಕೆಗೆ ಬಂದರೂ ಅಚ್ಚರಿಯಿಲ್ಲ. ಬಂಡವಾಳಶಾಹಿಗಳಿಂದ ರೈತರನ್ನು ಕಾಪಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...