ನಮಗೆ ಮುಸ್ಲಿಂ ಮತಗಳು ಬೇಡ ಎಂದು ಹೇಳಿರುವ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ರಾಜು ಸೇಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಂ ಮತಗಳು ಬೇಡ ಎನ್ನುವುದು ತಪ್ಪು ಕಲ್ಪನೆ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಭಿನ್ನತೆ ಉಂಟಾಗುತ್ತದೆ. ಎಲ್ಲ ಸಮುದಾಯದ ಜನರ ಸಹಕಾರದಿಂದಲೇ ದೇಶ ಮತ್ತು ರಾಜ್ಯ ಅಭಿವೃದ್ಧಿ ಸಾಧ್ಯ,” ಎಂದು ಹೇಳಿದರು.
ಯತ್ನಾಳ ಅವರ ಸಾಮರ್ಥ್ಯವನ್ನು ಮೆಚ್ಚಿದ ಅವರು, “ಅವರಿಗೆ ಒಳ್ಳೆಯ ಬುದ್ಧಿ ಮತ್ತು ನೆನಪಿನ ಶಕ್ತಿ ಇದೆ. ಸದನದಲ್ಲಿ ಉತ್ತಮವಾಗಿ ಮಾತನಾಡುತ್ತಾರೆ. ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋದರೆ ಅವರು ದೊಡ್ಡ ನಾಯಕರಾಗಬಹುದು,” ಎಂದು ಅಭಿಪ್ರಾಯಪಟ್ಟರು.
ಇನ್ನೂ ಚುನಾವಣಾ ಕುರಿತು ಮಾತನಾಡಿದ ಅವರು, “ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
This video cannot be played in your browser. Open the video directly
ಅಲ್ಪಸಂಖ್ಯಾತರ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಅವರು, “ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿಲ್ಲ. ಟಿಕೆಟ್ ಹಂಚಿಕೆ ವಿಷಯದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ. ಸಚಿವ ಜಮೀರ ಅಹ್ಮದ್ ಖಾನ್ ಅವರಿಗೆ ಯಾವುದೇ ಅಸಮಾಧಾನ ಇಲ್ಲ,” ಎಂದು ಹೇಳಿದರು.




