ಬೆಳಗಾವಿ ನಗರದ ವಡಗಾವ ಸಾಯಿ ನಗರದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ವಿಠಲ ಲೋಕರಿ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಿಠಲ ಲೋಕರಿ ಅವರ ಆತ್ಮಹತ್ಯೆ ವಿಷಯ ತಿಳಿದು ನಿವಾಸಕ್ಕೆ ತೆರಳಿದ ರಾಹುಲ್ ಜಾರಕಿಹೊಳಿ, ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದರು. “ನಾವು ನಿಮ್ಮೊಂದಿಗಿದ್ದೇವೆ. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ” ಎಂದು ಹೇಳಿ, ಕುಟುಂಬಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಆಪ್ತ ಸಹಾಯಕ ಮಲಗೌಡ ಪಾಟೀಲ್ ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.



