ಬೆಳಗಾವಿ | ಸಾಲದ ಸುಳಿಗೆ ಸಿಲುಕಿ ನೇಕಾರ ಕಾರ್ಮಿಕ ಆತ್ಮಹತ್ಯೆ: ₹25 ಲಕ್ಷ ಪರಿಹಾರಕ್ಕೆ ಆಗ್ರಹ

Date:

ಸಾಲದ ಸುಳಿಯಿಂದ ಮಗ್ಗದ ಕಾರ್ಖಾನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ನೇಕಾರ ಕಾರ್ಮಿಕ ವಿಠಲ ಲೋಖರಿ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನೇಕಾರ ಸಮುದಾಯ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಬೆಳಗಾವಿ ನಗರದ ವಡಗಾವಿ ಮತ್ತು ಖಾಸಬಾಗ ಪ್ರದೇಶಗಳು ನೇಕಾರಿಕೆ ಉದ್ಯಮಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿ 15 ಸಾವಿರಕ್ಕೂ ಅಧಿಕ ವಿದ್ಯುತ್‌ ಮಗ್ಗಗಳು ಹಾಗೂ ಸಾವಿರಕ್ಕೂ ಹೆಚ್ಚು ಕಾರ್ಖಾನೆಗಳಿವೆ. 15ರಿಂದ 18 ಸಾವಿರಕ್ಕೂ ಅಧಿಕ ಪುರುಷ ಹಾಗೂ ಮಹಿಳಾ ಕಾರ್ಮಿಕರು ಇಲ್ಲಿ ದುಡಿಯುತ್ತಿದ್ದಾರೆ. ಆದರೆ ಹಲವು ವರ್ಷಗಳಿಂದ ಕಾರ್ಮಿಕರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್, ಬೋನಸ್‌ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಸಂಘಟನೆಗಳು ಆರೋಪಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಠ್ಠಲ ಲೋಖರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಚಿಕಿತ್ಸಾ ವೆಚ್ಚ ಹಾಗೂ ಕುಟುಂಬ ನಿರ್ವಹಣೆಗಾಗಿ ಸುಮಾರು ₹6 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲದ ಹೊರೆಯಿಂದ ಹೊರಬರಲಾಗದೆ ಆ.16ರಂದು ತಾವು ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಹಾಗೂ ಪ್ರಥಮ ಪಿಯುಸಿ, 8ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ದುಡಿದು ಕುಟುಂಬ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವುದರಿಂದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಕ್ಕಳ ಶಿಕ್ಷಣ ಹಾಗೂ ಪತ್ನಿಯ ಆರೋಗ್ಯ ಕಾಪಾಡಲು ಸರ್ಕಾರ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ನೇಕಾರ ಮಾಲೀಕರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ, ವಿದ್ಯುತ್‌ ಸಬ್ಸಿಡಿ ಹಾಗೂ ಆಧುನಿಕ ಮಗ್ಗಗಳ ಖರೀದಿಗೆ ಸಹಾಯ ದೊರೆಯುತ್ತಿದ್ದರೂ, ಕಾರ್ಮಿಕರ ಕೂಲಿ ಕಳೆದ ಹಲವು ವರ್ಷಗಳಿಂದ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಸಂದರ್ಭದಲ್ಲಿ ಇದ್ದ ಕೂಲಿಯನ್ನೂ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ, ₹6 ಲಕ್ಷ ಸಾಲ ಮನ್ನಾ, ಪತ್ನಿಗೆ ಉದ್ಯೋಗ, ಮಕ್ಕಳಿಗೆ ವಿದ್ಯಾರ್ಥಿವೇತನ ಅಥವಾ ಶುಲ್ಕ ಮನ್ನಾ, ಕೂಲಿ ನೇಕಾರರಿಗೆ ಕಡಿಮೆ ಬಡ್ಡಿದರದ ಸಾಲ, ಕನಿಷ್ಠ ವೇತನ ಜಾರಿ ಹಾಗೂ ಕೂಲಿ ನೇಕಾರ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಬೇಕು. ಅಲ್ಲದೆ, ಕಳೆದ ಹತ್ತು ವರ್ಷಗಳಿಂದ ಹೆಚ್ಚಳವಾಗದ ನೇಕಾರರ ಕೂಲಿಯನ್ನು ಹೆಚ್ಚಿಸಿ ಪ್ರತಿವರ್ಷ ಪರಿಷ್ಕರಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕರ್ನಾಟಕ ಶ್ರಮಿಕ ಶಕ್ತಿ, ಕೂಲಿ ನೇಕಾರ ಕಾರ್ಮಿಕ ಸಂಘಟನೆ ಬೆಳಗಾವಿ, ಎದ್ದೇಳು ಕರ್ನಾಟಕ, ವೆಲೇರ್ ಪಾರ್ಟಿ ಆಫ್ ಇಂಡಿಯಾ ಹಾಗೂ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...