ಬೆಳಗಾವಿ | ಹಿಡಕಲ್ ಜಲಾಶಯ ಯೋಜನೆ ಡಿಕೆಶಿ ಮತ್ತು ಸತೀಶ ಜಾರಕಿಹೊಳಿ ಸಮರಕ್ಕೆ ಕಾರಣವಾಗುವುದೆ ?

Date:

ಬೆಳಗಾವಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಕಾಮಗಾರಿ ಸ್ಟಾಪ್ ಮಾಡಿಸಿದ್ದರು. ಆದರೆ ಬೆಳಗಾವಿ ಜಿಲ್ಲೆಯ ಜನರ ವಿರೋಧವಿದ್ದರೂ ಇದೆ ಕಾಮಗಾರಿಯನ್ನು ಡಿಸಿಎಂ ಡಿಕೆ ಶಿವಕುಮಾರ ಅಸ್ತು ಅಂದಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಡಿಸಿಎಂ ಡಿಕೆಶಿ ಮತ್ತು ಸತೀಶ್ ಮಧ್ಯೆ ಮತ್ತೊಂದು ಹಂತದ ಸಮರಕ್ಕೆ ನಾಂದಿ ಹಾಡಿದೆ.

- Advertisement -

ಬೆಳಗವಿ ಜನರಿಗೆ ನೀರಿನ ಅಭಾವ ಆಗುವ ಸಾಧ್ಯತೆ ಇದೆ ಎಂದು ವಿವಿಧ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದವು ಹಾಗಾಗಿ ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ವಾಟ‌ರ್ ಲಿಫ್ಟ್ ಕಾಮಗಾರಿ ನಿಲ್ಲಿಸಲಾಗಿತ್ತು. ಆದರೆ ಧಾರವಾಡಕ್ಕೆ ವಾಟರ್ ಲಿಫ್ಟ್ ಕಾಮಗಾರಿ ಮರು ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

110 ಕಿಮೀ ಪೈಪ್‌ಲೈನ್ ಅಳವಡಿಕೆಗೆ 350 ಕೋಟಿ ವೆಚ್ಚದ ಧಾರವಾಡ ಕೆಐಎಡಿಬಿ ಅಧಿಕಾರಿಗಳು ರೂಪಿಸಿದ್ದ ವಾಟರ್‌ ಲಿಫ್ಟ್ ಯೋಜನೆ ಸತೀಶ ಜಾರಕಿಹೊಳಿ, ಜಿಲ್ಲಾಡಳಿತ ಗಮನಕ್ಕೆ ತರದೇ ಮೂರು ತಿಂಗಳ ಹಿಂದೆ ಕಾಮಗಾರಿ ನಡೆದಿತ್ತು. ವಾಟರ್ ಲಿಫ್ಟ್‌ಗೆ ಕಾಮಗಾರಿಗೆ ಬೆಳಗಾವಿಯಲ್ಲಿ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾಡಳಿತ ಕಾಮಗಾರಿ ನಿಲ್ಲಿಸಿತು.

ಈಗ ಮತ್ತೇ ಜಲಸಂಪನ್ಮೂಲ ಇಲಾಖೆ ಈ ಯೋಜನೆ ಪುನರಾರಂಭಕ್ಕೆ ಡಿಕೆಶಿ ಅಸ್ತು ಎನ್ನಲಾಗಿದೆ. ಮತ್ತೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕದಲ್ಲಿ ಕಾಮಗಾರಿ ಪುನರಾರಂಭಿದಲಾಗಿದೆ. ಜನಾಕ್ರೋಶ ವ್ಯಕ್ತವಾಗುವ ಭೀತಿ ಹಿನ್ನೆಲೆಯಲ್ಲಿ ಪೈಪ್ ಅಳವಡಿಕೆ ಕಾಮಗಾರಿ ವೇಗ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...