ಬೆಳಗಾವಿ | ದೇಶವನ್ನೇ ಬೆಚ್ಚಿ ಬೀಳಿಸಿದ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಶಿಕ್ಷೆ ತೀರ್ಪು ನಾಳೆಗೆ

Date:

ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾದ ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದ ಅಮಾನವೀಯ ಪ್ರಕರಣದಲ್ಲಿ, ಶಿಕ್ಷೆಯ ಪ್ರಮಾಣ ಘೋಷಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.

- Advertisement -

ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್‌.ಎಸ್. ಮಂಜುನಾಥ ಅವರು ಇಂದು ಪ್ರಕಟವಾಗಬೇಕಿದ್ದ ಶಿಕ್ಷೆ ತೀರ್ಪನ್ನು ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಎಲ್ಲಾ 12 ಮಂದಿ ಆರೋಪಿಗಳನ್ನು ಪೊಲೀಸರು ಮತ್ತೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಂದು ಬೆಳಿಗ್ಗೆ ಹಿಂಡಲಗಾ ಜೈಲಿನಿಂದ ಪೊಲೀಸ್‌ ವಾಹನಗಳಲ್ಲಿ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಮಧ್ಯಾಹ್ನದ ನಂತರ ಶಿಕ್ಷೆ ಪ್ರಕಟವಾಗಲಿದೆ ಎಂಬ ನಿರೀಕ್ಷೆ ಇದ್ದರೂ, ನ್ಯಾಯಾಲಯ ತೀರ್ಪನ್ನು ನಾಳೆಗೆ ಮುಂದೂಡಿತು.

ಘಟನೆಯ ಹಿನ್ನೆಲೆ

2023ರ ಡಿಸೆಂಬರ್ 11ರಂದು ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತನ್ನ ಪ್ರೇಯಸಿಯೊಂದಿಗೆ ಮನೆ ಬಿಟ್ಟು ಪರಾರಿಯಾಗಿದ್ದ ಹಿನ್ನೆಲೆಯಲ್ಲಿ, ಯುವತಿಯ ಕುಟುಂಬಸ್ಥರು ಆತನ ಮನೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಬಳಿಕ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿತ್ತು.

ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯ ಮೇಲಿನ ಈ ಕ್ರೂರ ಕೃತ್ಯವನ್ನು ಮಾನವೀಯತೆಗೆ ಮೀರಿದ ಅಪರಾಧವೆಂದು ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರ ಪ್ರಕರಣಕ್ಕೆ ಸಂಬಂಧಿಸಿದ ಪ್ರೇಮಿಗಳು ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸಾರ್ವಜನಿಕ ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ

ನಾಳೆ ಶಿಕ್ಷೆ ಘೋಷಣೆ

ಮಹಿಳೆಯರ ಮೇಲಿನ ಹಿಂಸಾಚಾರ ಹಾಗೂ ಸಾಮಾಜಿಕ ಕ್ರೌರ್ಯದ ವಿರುದ್ಧ ನ್ಯಾಯಾಂಗದ ಮಹತ್ವದ ಪರೀಕ್ಷೆಯಾಗಿ ಈ ಪ್ರಕರಣ ಪರಿಗಣಿಸಲಾಗಿದೆ. ನಾಳೆ ಪ್ರಕಟವಾಗಲಿರುವ ಶಿಕ್ಷೆ ತೀರ್ಪು, ಇಂತಹ ಅಪರಾಧಗಳಿಗೆ ಕಠಿಣ ಸಂದೇಶ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...