ಬೆಳಗಾವಿ : ಮದ್ಯ ನಿಷೇಧ, ನರೇಗಾ ದಿನ ಹಾಗೂ ಕೂಲಿ ಹೆಚ್ಚಳಕ್ಕಾಗಿ ಮಹಿಳೆಯರ ಪ್ರತಿಭಟನೆ

Date:

ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಬೇಕು ಹಾಗೂ ನರೇಗಾ ಯೋಜನೆಯಡಿ ಕೆಲಸದ ದಿನಗಳು ಮತ್ತು ಕೂಲಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಮಹಿಳಾ ಪದಾಧಿಕಾರಿಗಳು ಹಾಗೂ ಗ್ರಾಕೂಸ್ ಸಂಘಟನೆಯ ಸದಸ್ಯರು ಬೆಳಗಾವಿ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಅನಿತಾ ಅವರು ಮಾತನಾಡಿ — “ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಹಿಳಾ ಗ್ರಾಮ ಸಭೆಗಳ ನಿರ್ಣಯದ ಆಧಾರದ ಮೇಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕದಲ್ಲಿಯೂ ಮಹಿಳೆಯರ ಅಭಿಪ್ರಾಯವನ್ನು ಪರಿಗಣಿಸಿ ಮದ್ಯ ನಿಷೇಧ ಜಾರಿಗೊಳಿಸಬೇಕು. ಜೊತೆಗೆ ನರೇಗಾ ಕೂಲಿ ದಿನಗಳನ್ನು 200 ದಿನಗಳವರೆಗೆ ಹೆಚ್ಚಿಸಿ, ಕೂಲಿ ಮೊತ್ತವನ್ನೂ ಪರಿಷ್ಕರಿಸಬೇಕು,” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಮಹಾದೇವಿ ಓಜಿ ಅವರು ಹೇಳಿದರು — “ಸರ್ಕಾರ ಹೊಸ ಮದ್ಯ ಅಂಗಡಿ ಪ್ರಾರಂಭಿಸಲು ಅಥವಾ ಪರವಾನಗಿ ನವೀಕರಿಸಲು ಮಹಿಳಾ ಗ್ರಾಮ ಸಭೆಯ ಅನುಮತಿ ಕಡ್ಡಾಯವಾಗಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಯುವಪೀಳಿಗೆಯ ಭವಿಷ್ಯ ಹಾಳಾಗುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯವೂ ಹೆಚ್ಚುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದರು.

ಶಕುಂತಲಾ ಅವರು ಮಾತನಾಡಿ — “ಮಹಿಳಾ ಸಂಘಟನೆಗಳ ಸದಸ್ಯರು ಹಾಗೂ ಗ್ರಾಮ ಸಭೆಗಳಲ್ಲಿ ಮಹಿಳೆಯರು ಮದ್ಯ ನಿಷೇಧದ ಠರಾವು ಪಾಸ್ ಮಾಡಿದಾಗ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರವಾಗಿ ಕೆಲಸ ನೀಡಬೇಕು,” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅನಿತಾ, ಶಕುಂತಲಾ, ಮಹಾದೇವಿ, ಪುಷ್ಪಾ ಮಜಗಾಂವಿ, ವನೀತಾ, ಲಕ್ಷ್ಮೀ, ರೂಪಾ, ಸುವರ್ಣ, ಸಾಗರಿಕಾ, ಯಲ್ಲಪ್ಪ, ವಿಶ್ವೇಶ್ವರಯ್ಯ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ...

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ...

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...