ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ ನಾಟ್ಯಯೋಗ ಟ್ರಸ್ಟ್ ಸಾಲಾಪೂರ ವತಿಯಿಂದ ಮಹಿಳೆಯರಿಗಾಗಿ ಜಾನಪದ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮ ಉದ್ಘಾಟಿಸಿ ಕಿಸಾನ್ ಸಮಿತಿಯ ಸದಸ್ಯ ಸಿದ್ದು ಹಂಪಿಹೊಳಿ ಮಾತನಾಡಿ, ಜನರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಚಾಲನೆ ನೀಡಿದ್ದರು. ಅದೇ ರೀತಿ ಇಂದು ಮಹಿಳೆಯರು ಒಗ್ಗಟ್ಟಿನಿಂದ ಜಾನಪದ ಕಾರ್ಯಕ್ರಮ ನಡೆಸುತ್ತಿರುವುದು ಮಹಿಳಾ ಶಕ್ತಿ ಹಾಗೂ ಸಾಮಾಜಿಕ ಒಗ್ಗಟ್ಟಿನ ಪ್ರತೀಕವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಮಹಿಳೆಯರು ಧಾರಾವಾಹಿಗಳಿಗೆ ಸೀಮಿತವಾಗದೆ ಜಾನಪದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಜಾನಪದ ಕಲೆಗಳ ತರಬೇತಿಗೆ ಅಗತ್ಯ ಸಹಾಯ ನೀಡುವುದಾಗಿ ಅವರು ಭರವಸೆ ನೀಡಿದರು.

ರಂಗಭೂಮಿ ನಿರ್ದೇಶಕರಾದ ಕಲ್ಲಪ್ಪ ಪೂಜೇರ ಮಾತನಾಡಿ ನಮ್ಮ ಹಬ್ಬಗಳು, ಆಚರಣೆಗಳು ಹಾಗೂ ಜಾನಪದ ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಗೌರಿ ಹುಣ್ಣಿಮೆ, ಭಾರತ ಹುಣ್ಣಿಮೆ, ಸೀಗೆ ಹುಣ್ಣಿಮೆ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಗ್ರಾಮದ ಜನರನ್ನು ಒಗ್ಗೂಡಿಸಿಕೊಂಡು ಆಚರಿಸುವ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಮುಂದಿನ ಪೀಳಿಗೆಗೆ ಜಾನಪದ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಹಂಪನ್ನವರ ಮಾತನಾಡಿ, ಹಿಂದಿನ ಕಾಲದಲ್ಲಿ ಮಹಿಳೆಯರು ಸೋಬಾನ ಪದ, ಜೋಗುಳ ಪದ ಹಾಗೂ ಬಿಸುಕಲ್ಲಿನ ಪದಗಳನ್ನು ಹಾಡುತ್ತಿದ್ದರು. ಇವು ಮಹಿಳೆಯರ ಬದುಕಿನ ಭಾಗವಾಗಿದ್ದವು. ಆದರೆ ಇಂದು ಇಂತಹ ಜಾನಪದ ಕಲೆಗಳು ನಿಧಾನವಾಗಿ ಮರೆಯಾಗುತ್ತಿವೆ. ಅವುಗಳನ್ನು ಉಳಿಸಿ ಮುಂದುವರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ವಿಷಯ ಎಂದರು.

1002427767

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಚಿನ್ನವ್ವ ಕೆಂಚರಡ್ಡಿ, ಗುರ್ಜಿ ಟೀಮ್ ಮುಖ್ಯಸ್ಥೆ ಕಸ್ತೂರಿ ರಾಜನಾಳ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ...

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...