ಬೆಳಗಾವಿ | ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಜೆಸಿಟಿಯು ಪ್ರತಿಭಟನೆ

Date:


ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಅಖಿಲ ಭಾರತ ಸದಾ ನಿರ್ವಹಣಾ ಮುಷ್ಕರದ ಭಾಗವಾಗಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಮಿಕರು, ರೈತರು, ನರೇಗಾ ಕೂಲಿಕಾರರು, ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

ಪ್ರಮುಖ ಬೇಡಿಕೆಗಳು:

ಗುತ್ತಿಗೆ ಹಾಗೂ ಅನೌಪಚಾರಿಕ ವಲಯದ ಕಾರ್ಮಿಕರಿಗೆ ಕಾಯಂಗೊಂಡ ಸೇವೆ ನೀಡಬೇಕು

ಕಾರ್ಮಿಕರ ದಿನಚರಿ ಕೆಲಸದ ಅವಧಿಯನ್ನು 8 ಗಂಟೆಗಷ್ಟೇ ಸೀಮಿತಗೊಳಿಸಬೇಕು

ನರೇಗಾ ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕು ಹಾಗೂ ನಗರ ಪ್ರದೇಶಕ್ಕೂ ವಿಸ್ತರಿಸಬೇಕು

ಆಶಾ, ಅಂಗನವಾಡಿ, ಬಿಸಿಯೂಟ ನೌಕರರಿಗೆ ಸೇವಾಭದ್ರತೆ ಒದಗಿಸಬೇಕು

ಸೇವಾಭದ್ರತೆ ಸಿಗುವವರೆಗೆ ಕನಿಷ್ಠ ವೇತನ ಖಚಿತಪಡಿಸಬೇಕು

ಈ ಹೋರಾಟಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್, ಔಷಧ ಮಾರಾಟ ಪ್ರತಿನಿಧಿಗಳ ಸಂಘ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಮುಂತಾದವುಗಳು ಬೆಂಬಲ ವ್ಯಕ್ತಪಡಿಸಿದ್ದವು.

ಪ್ರತಿಭಟನೆಯಲ್ಲಿ ಜಿ.ವಿ. ಕುಲಕರ್ಣಿ, ಲಕ್ಷ್ಮಣ ಜಡಗನ್ನವರ, ಶಾರದಾ ದಾಬಡೆ, ಮಂದಾ ನೇವಗಿ, ಲಕ್ಕಪ್ಪ ಬಿಜ್ಜನ್ನವರ, ರಾಜೀವ್ ಗಾಣಗಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...